ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಸಿಂಚನ ಜಿಲ್ಲಾ ಮಟ್ಟಕ್ಕೆ ಆಯ್ಕೆ

0


ಕಡಬ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಇದರ ಸಹಭಾಗಿತ್ವದಲ್ಲಿ ಸರಸ್ವತಿ ಸಮೂಹ ಸಂಸ್ಥೆಗಳು ಕಡಬದಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಕುಮಾರಿ ಸಿಂಚನ ಉತ್ತಮ ಯೋಗ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿನಿಗೆ ಪ್ರಮುಖ ಯೋಗ ತರಬೇತುದಾರರಾದ ವಿಜೇಶ್ ಯೋಗ ತರಬೇತಿ ನೀಡಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಅವರು ಮಾರ್ಗದರ್ಶನ ನೀಡಿದ್ದರು. ಶಾಲಾ ಮುಖ್ಯ ಗುರುಗಳಾದ ಸತೀಶ್ ಭಟ್ ಹಾಗೂ ಶಿಕ್ಷಕ ವೃಂದ ಸಹಕರಿಸಿದ್ದರು.

LEAVE A REPLY

Please enter your comment!
Please enter your name here