ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪುತ್ತೂರು ಇದರ ಆಶ್ರಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತಗಾಯನ ಸ್ಪರ್ಧೆಯಲ್ಲಿ ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಯ ಬುಲ್ ಬುಲ್ ವಿದ್ಯಾರ್ಥಿಗಳ ತಂಡ ಮತ್ತು ಸ್ಕೌಟ್ಸ್ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡು ಜಿಲ್ಲಾಮಟ್ಟದ ಗೀತಗಾಯನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಬುಲ್ ಬುಲ್ ವಿದ್ಯಾರ್ಥಿಗಳಾದ ಹನಿಷ್ಕಾ.ಯಸ್., ವೃಹಾ ಅನಿಲ್ .ಯಂ,ಪುಣ್ಯ .ಬಿ.ಯನ್, ಸಾನ್ವಿ ಗೌಡ, ಅಮೃತಾ .ಜೆ.ಯನ್., ಆಜ್ಞಾ ರೈ ಮತ್ತು ಸ್ಕೌಟ್ಸ್ ವಿದ್ಯಾರ್ಥಿಗಳಾದ-
ಸಾಯಿಸಂಚಿತ್ ಅಜೇಯಕೃಷ್ಣ. ಡಿ, ಋತ್ವಿಕ್ ಮೊಳೆಯಾರ್, ಅಖಿಲ್ .ಬಿ.ಎ ,ವಿದಾತ್ ರೈ,ವಿನೀತ್ .ಟಿ.ಯಸ್, ಜನಿತ್,ತುಷಾರ್,
ಇವರು ಆಯ್ಕೆಯಾಗಿರುತ್ತಾರೆ.
ಇವರಿಗೆ ಶಿಕ್ಷಕ ಮುರಳೀಕೃಷ್ಣ .ಪಿ., ಅನಿತಾ, ಹರೀಶ್ ತರಬೇತಿ ನೀಡಿರುತ್ತಾರೆ. ಇವರಿಗೆ ಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್ ಹಿಂದಾರು ಮತ್ತು ಮುಖ್ಯೋಪಾಧ್ಯಾಯರಾದ ಜಯಮಾಲಾ. ವಿ.ಎನ್. ಅಭಿನಂದನೆಗಳನ್ನು ತಿಳಿಸಿರುತ್ತಾರೆ.