ಆ.27: ಪಂಜಳ ಶಾಂತಿಗಿರಿ ವಿದ್ಯಾನಿಕೇತನ್ ಶಾಲೆಯಲ್ಲಿ ಪುತ್ತೂರು,ಕಡಬ ತಾ.ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ,ಬಾಲಕಿಯರ ವಾಲಿಬಾಲ್ ಪಂದ್ಯಾಟ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ನರಿಮೊಗರು ಹಾಗೂ ಡಯೋಸಿಸ್ ಆಫ್ ಪುತ್ತೂರು ಟ್ರಸ್ಟ್‌ಗೊಳಪಟ್ಟ ಶಾಂತಿಗಿರಿ ವಿದ್ಯಾನಿಕೇತನ್ ಶಾಲೆ ಪಂಜಳ ಇದರ ಸಹಯೋಗದೊಂದಿಗೆ ಆ.27 ರಂದು ಪಂಜಳ ಶಾಂತಿಗಿರಿ ವಿದ್ಯಾನಿಕೇತನ್ ಶಾಲೆಯಲ್ಲಿ ನಡೆಯಲಿದೆ.


ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪಂದ್ಯಾಟದ ದೀಪ ಪ್ರಜ್ವಲನೆ ಮಾಡಲಿದ್ದು, ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ.ವಂ.ಡಾ.ಗೀವರ್ಗೀಸ್ ಮಾರ್ ಮಕಾರಿಯೋಸ್‌ರವರು ಆಶೀರ್ವಚನವನ್ನು ನೆರವೇರಿಸಲಿದ್ದಾರೆ. ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹರಿಣಿ ನಿತ್ಯಾನಂದರವರು ಅಧ್ಯಕ್ಷತೆ ವಹಿಸಲಿದ್ದಾರೆ.

ತೀರ್ಪುಗಾರರಿಗೆ ಸಮವಸ್ತ್ರ ವಿತರಣೆಯನ್ನು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ಪಂದ್ಯಾಟದ ಉದ್ಘಾಟನೆಯನ್ನು ಕೊಂಬೆಟ್ಟು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಹೇಮನಾಥ ಶೆಟ್ಟಿ ಕಾವುರವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಂಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖಖ ಎನ್.ಎಸ್.ಡಿ, ನರಿಮೊಗರು ಗ್ರಾಮ ಪಂಚಾಯತ್ ಸದಸ್ಯ ನವೀನ್ ರೈ ಶಿಬರ, ಪುತ್ತೂರು ಕ್ಷೇತ್ರ ಸಮನ್ವಯಾಧಿಕಾರಿ ನವೀನ್ ವೇಗಸ್, ಪುತ್ತೂರು ದೈಹಿಕ ಶಿಕ್ಷಣ ಪರಿವೀಕ್ಷಕ ಎ.ವಿ ಚಕ್ರಪಾಣಿ, ಪುತ್ತೂರು ಪ್ರಾಥಮಿಕ ಶಾಲಾ ವಿಭಾಗದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಮತಿ ರತ್ನಾಕುಮಾರಿರವರು ಭಾಗವಹಿಸಲಿದ್ದಾರೆ ಎಂದು ಪಂಜಳ ಶಾಂತಿಗಿರಿ ವಿದ್ಯಾನಿಕೇತನ್ ಶಾಲೆಯ ಸಂಚಾಲಕ ವಂ|ಬಿಜು ಕೆ.ಜಿ, ಮುಖ್ಯಗುರು ಶ್ರೀಮತಿ ಅಶ್ವತಿ ಅರವಿಂದ್, ಆಡಳಿತ ಮಂಡಳಿ, ಬೋಧಕ-ಬೋಧಕೇತರ ವೃಂದ, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ರತ್ನಾಕರ ರೈ ಹಾಗೂ ಪದಾಧಿಕಾರಿಗಳು, ಕ್ರೀಡಾ ಕಾರ್ಯದರ್ಶಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ರಾಜೀವಿ ಶೆಟ್ಟಿ, ಶಾಲಾ ನಾಯಕ ಮಹಮದ್ ಶಹೀಮ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here