ಅರಿಯಡ್ಕಶ್ರೀಕೃಷ್ಣ ಭಜನಾ ಮಂದಿರದಲ್ಲಿ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ

0

ಅರಿಯಡ್ಕ: ಶ್ರೀ ಕೃಷ್ಣ ಭಜನಾ ಮಂದಿರ (ರಿ.) ಕೌಡಿಚ್ಚಾರು ಅರಿಯಡ್ಕ ಇದರ ವತಿಯಿಂದ ಆ.26ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ವಿಜೃಂಭಣೆಯಿಂದ ನೆರವೇರಿತು.

ಕೃಷ್ಣ ರಾಧೆ ವೇಷ ಸ್ಪರ್ಧೆ, ಪುತ್ತೂರಿನ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇವರ ವತಿಯಿಂದ ಭಾಸ್ಕರ ಬಾರ್ಯ ನಿರ್ದೇಶನದಲ್ಲಿ ಯಕ್ಷಗಾನ ತಾಳಮದ್ದಳೆ ʼಜಾಂಬವತಿ ಕಲ್ಯಾಣʼ, ಮತ್ತು ಚಂದ್ರೋದಯ ತನಕ ವಿಶೇಷ ಭಜನಾ ಸಂಕೀರ್ತನೆ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಭಜನಾ ಮಂದಿರದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here