ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘ, ದಕ್ಷಿಣ ಕನ್ನಡ ಪ.ಪೂ ಪ್ರಾಂಶುಪಾಲರ ಸಂಘ ಮತ್ತು ಸಂತ ಫಿಲೋಮಿನಾ ಪ.ಪೂ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಆ.29ರಂದು ಸಂತ ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ಒಂದು ದಿನದ ರಾಜ್ಯಶಾಸ್ತ್ರದ ಕಾರ್ಯಾಗಾರವು ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ವಿಧಾನ ಪರಿಷತ್ತಿನ ಸಭಾಧ್ಯಕ್ಷರಾದ ಯು.ಟಿ. ಖಾದರ್ ನೆರವೇರಿಸಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಪಿ.ಎಲ್ ಧರ್ಮ ರಾಜ್ಯಶಾಸ್ತ್ರದ ಪರಿಷ್ಕೃತ ಕೈಪಿಡಿಯ ಬಿಡುಗಡೆ ಮತ್ತು ದಿಕ್ಸೂಚಿ ಭಾಷಣವನ್ನು ಮಾಡಲಿದ್ದು, ಕಾರ್ಯಗಾರದ ಅಧ್ಯಕ್ಷತೆಯನ್ನು ದ.ಕ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ಇದರ ಉಪ ನಿರ್ದೇಶಕರಾದ ಸಿ.ಡಿ. ಜಯಣ್ಣ ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ದ.ಕ ಜಿಲ್ಲಾ ಪ ಪೂ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಜಯಾನಂದ ಸುವರ್ಣ, ಫಿಲೋಮಿನಾ ಪ.ಪೂ ಕಾಲೇಜಿನ ಸಂಚಾಲಕರಾಗಿರುವ ರೆ.ಫಾ ಲಾರೆನ್ಸ್ ಮಸ್ಕರೇನಸ್, ಫಿಲೋಮಿನಾ ಪ .ಪೂ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ಅಶೋಕ್ ರಾಯನ್ ಕ್ರಾಸ್ತಾ ಭಾಗವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರು ವಿಜಯ ಕರ್ನಾಟಕ ಪತ್ರಿಕೆಯ ಚೀಫ್ ಕೋಪಿ ಎಡಿಟರ್ ಆದ ಆರ್.ಸಿ ಭಟ್, ಮೈಸೂರು ಶ್ರೀ ಡಿ ದೇವರಾಜ್ ಅರಸ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಆರ್.ಜಿ ಚಿದಾನಂದ ಹಾಗೂ ಪುತ್ತೂರು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಸಹ ಪ್ರಾಧ್ಯಾಪಕರಾದ ಐವನ್ ಲೋಬೊ ಭಾಗವಹಿಸಲಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ