





ರಾಮಕುಂಜ: ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆಯನ್ನು ಆ.26ರಂದು ವಿಜ್ರಂಭಣೆಯಿಂದ ಆಚರಿಸಲಾಯಿತು.
ಮಕ್ಕಳಿಗಾಗಿ ವಿವಿಧ ರೀತಿಯ ಮನೋರಂಜನಾ ಕಾರ್ಯಕ್ರಮ ಆಯೋಜಿಸಲಾಯಿತು. ಸಣ್ಣ ಮಕ್ಕಳಿಗಾಗಿ ಕೃಷ್ಣವೇಷ ಸ್ಪರ್ಧೆ ಆಯೋಜಿಸಲಾಗಿತ್ತು. ಮಕ್ಕಳೆಲ್ಲಾ ಕೃಷ್ಣ ರಾಧಾ ವೇಷ ಧರಿಸಿ ಸಂತೋಷದಿಂದ ಕುಣಿದು ಕುಪ್ಪಳಿಸಿದರು. ಅಪರಾಹ್ನದ ನಂತರ ಮಕ್ಕಳಿಗೆ ಮೊಸರು ಮಡಕೆಯನ್ನು ಆಯೋಜಿಸಲಾಯಿತು. ಅದರಲ್ಲಿ ಮಕ್ಕಳೆಲ್ಲರು ಭಾಗವಹಿಸಿ ಸಂಭ್ರಮಿಸಿದರು. ಕಾರ್ಯಕ್ರಮದ ಕೊನೆಗೆ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಶಾಲಾ ಸಂಚಾಲಕರಾದ ಶಿವಪ್ರಸಾದ್ ಆಚಾರ್ಯ, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಬಾಲಚಂದ್ರ ಮುಂಚಿತ್ತಾಯ, ಶಾಲಾ ಪ್ರಾಂಶುಪಾಲ ಪ್ರವೀದ್ ಪಿ ಉಪಸ್ಥಿತರಿದ್ದರು. ಸಹಶಿಕ್ಷಕಿ ವರ್ಷಿತಾ ಸ್ವಾಗತಿಸಿದರು. ಶ್ರೀಲಕ್ಷ್ಮೀ ವಂದಿಸಿದರು. ಶಾಲಾ ಶಿಕ್ಷಕ ವರ್ಗ, ಸಿಬ್ಬಂದಿ ವರ್ಗ ಮತ್ತು ಪೋಷಕರು ಸಹಕರಿಸಿದರು.












