ವಿದ್ಯಾಭಾರತಿ ರಾಜ್ಯಮಟ್ಟದ ಶಟಲ್‌ ಬ್ಯಾಡ್ಮಿಂಟನ್‌- ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

0

ಪುತ್ತೂರು: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇವರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಶಟಲ್‌ ಬ್ಯಾಡ್ಮಿಂಟನ್‌ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಭಾಗವಹಿಸಿತು. ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದರೆ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.
ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಹರ್ಷಿತಾ, ಆಹನಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಹ ಶ್ರೀ ಭಾಗವಹಿಸಿದ್ದರು. ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನ್ವಿತ್‌ ರೈ, ಅಕ್ಷಯ್‌ ನಾಯಕ್ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿ ಯಶಸ್‌.ಎಚ್‌. ರಜನಿ, ಯಶಸ್ವಿನ್‌. ಡಿ ಭಾಗವಹಿಸಿದ್ದರು. ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here