ಪುತ್ತೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಆಡಿಯೋ ಹಾಗೂ ಈ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಗಳ ಕುರಿತಾಗಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಕೊನೆಗೂ ಮೌನ ಮುರಿದಿದ್ದು, ಇದಕ್ಕೆ ಸಂಬಂಧಿಸಿದಂತೆ ಪತ್ರಿಕಾ ಪ್ರಕಟನೆಯೊಂದನ್ನು ಹೊರಡಿಸಿ ಸ್ಪಷ್ಟನೆ ನೀಡಿದ್ದಾರೆ.
ಅದರ ಪೂರ್ಣಪಾಠ ಇಲ್ಲಿದೆ:
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಆಡಿಯೋ ಹಾಗೂ ಈ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಗಳ ಕುರಿತಾಗಿ ಈ ಸ್ಪಷ್ಟನೆ
ಕಳೆದ ವಿಧಾನಸಭಾ ಚುನಾವಣೆ ಮತ್ತು ನಂತರ ನಡೆದಿರುವ ಆರೋಪ ಪ್ರತ್ಯಾರೋಪಗಳು ಎಲ್ಲವೂ ಜನತೆಯ ಮುಂದಿರುವುದು ನಮಗೆಲ್ಲ ತಿಳಿದ ವಿಚಾರ. ಚುನಾವಣಾ ಸಂದರ್ಭದಲ್ಲಿ 3.5 ಕೋಟಿ ರೂಪಾಯಿ ವ್ಯವಹಾರದ ಆಪಾದನೆ ಮತ್ತು ನಾನು ಅದರ ಬಗ್ಗೆ ಸಾರ್ವಜನಿಕ ಸಭೆಯಲ್ಲಿ ಹೇಳಿರುವ ವಿಚಾರಕ್ಕೆ ಇಂದು ಕೂಡ ಬದ್ಧನಾಗಿದ್ದೇನೆ.
ಆದರೆ ಈ ರೀತಿಯಾಗಿ ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದು ನಾನು ಭಾವಿಸಿದ್ದೇನೆ.
ಮುಂದಿನ ದಿನಗಳಲ್ಲೂ ಇದೇ ರೀತಿಯ ರಾಜಕೀಯ ಷಡ್ಯಂತರಗಳನ್ನು ನಡೆಯುವ ಬಗ್ಗೆ ನಾನು ಹಿರಿಯರ ಹಾಗೂ ಅಧಿಕಾರಿಗಳ ಸೂಚನೆಯಂತೆ ಕಾನೂನಿನ ಚೌಕಟ್ಟಿನಲ್ಲಿ ಮುಂದುವರಿಯುತ್ತೇನೆ.
ಅರುಣ್ ಕುಮಾರ್ ಪುತ್ತಿಲ
Youtube Link: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲರದ್ದು ಎನ್ನಲಾದ ಆಡಿಯೋ ವೈರಲ್