ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯು ಆ.27ರಂದು ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ ನಡೆಯಿತು.
ವಿಚಾರಗೋಷ್ಠಿಯನ್ನು ಅತಿಥಿಗಳೆಲ್ಲರೂ ವಿದ್ಯುನ್ಮಾನ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿದ್ದ ಶಿಕ್ಷಣ ಸಂಯೋಜಕ ಹರಿಪ್ರಸಾದ್ ಮಾತನಾಡಿ, ವಿಜ್ಞಾನವೆಂದರೆ ಸತ್ಯಶೋಧನೆ. ಅಂತಹ ಸಂಶೋಧನೆ ಮಾಡುವ ಸಾಮರ್ಥ್ಯ ಪ್ರತಿಯೊಬ್ಬರಲ್ಲಿದ್ದು ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಪ್ರಯತ್ನಿಸಿದರೆ ಉತ್ತಮ ಫಲಿತಾಂಶ ದೊರೆಯಲಿದೆ ಎಂದರು.
ಪ್ರೌಢ ಶಾಲಾ ಸಹ-ಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಹಂ ರವರು ಮಾತನಾಡಿ, ವಿದ್ಯಾರ್ಥಿಗಳು ಮಂಡನೆ ಮಾಡಲಿರುವ ವಿಜ್ಞಾನದ ವಿಚಾರಗಳು ಎಲ್ಲಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವಾಗಲಿ ಎಂದು ಶುಭಹಾರೈಸಿದರು. ಶಿಕ್ಷಣ ಸಂಯೋಜಕಿ ಅಮೃತಾಕಲಾ ಮಾತನಾಡಿ, ಸ್ಪರ್ಧಾ ನಿಯಮಗಳನ್ನು ವಿವರಿಸಿದರು.
ತೀರ್ಪುಗಾರರಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬಿಸಿಎ ವಿಭಾಗದ ಮುಖ್ಯಸ್ಥ ವಿನಯಚಂದ್ರ ಹಾಗೂ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಕಂಪ್ಯೂಟರ್ ವಿಭಾಗದ ಉಪನ್ಯಾಸಕ ಆಶ್ಲೇಷ್, ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲಾ ಮುಖ್ಯ ಶಿಕ್ಷಕಿ ರೋಸಲಿನ್ ಲೋಬೊ ಹಾಗೂ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಅಶ್ರಫ್ ಪಿ ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ಲೋಕೆಶ್ ಎಸ್ ಆರ್ ರವರು ವಿಚಾರಗೋಷ್ಠಿಗೆ ಭೇಟಿ ನೀಡಿದರು. ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಾಲಾ ಮುಖ್ಯ ಶಿಕ್ಷಕಿ ರೋಸಲಿನ್ ಲೋಬೊ ಸ್ವಾಗತಿಸಿದರು.
23 ಶಾಲೆಗಳ ವಿದ್ಯಾರ್ಥಿಗಳು ಭಾಗಿ:
ಒಟ್ಟು 23 ಶಾಲೆಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲಾ ಅಂಜಲಿ ಒಲಿವೆರಾ(ಪ್ರ), ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಧನುಷ್ ಡಿ ಜಿ(ದ್ವಿ) ಹಾಗೂ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ವೈಶಾಕ್(ತೃ) ಬಹುಮಾನ ಪಡೆದುಕೊಂಡರು.
ಸ್ಪರ್ಧೆಯ ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ರೋಸಲಿನ್ ಲೋಬೋರವರು ಪ್ರಶಸ್ತಿ ಪತ್ರಗಳನ್ನು ವಿತರಿಸಿದರು. ಶಿಕ್ಷಕರಾದ ಇನಾಸ್ ಗೊನ್ಸಾಲ್ವಿಸ್, ಲೆನಿಟಾ ಮೊರಾಸ್, ಹರಿಣಾಕ್ಷಿ,ಅನುಷಾ, ಸುನಿತಾ ಪಿಂಟೊ, ಭಾವನಾ ಸುಧೀರ್ ಸಹಕರಿಸಿದರು. ರೂಪಾ ಡಿ.ಕೋಸ್ಟ ರವರು ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ಗೈಡ್ಸ್ ವಿದ್ಯಾರ್ಥಿನಿಯರು ಕಾರ್ಯಕ್ರಮಕ್ಕೆ ಸಹಕರಿಸಿದರು.