ವಿಟ್ಲ: ಭಾರೀ ಮಳೆಯಿಂದಾಗಿ ವಿಟ್ಲ ಠಾಣಾ ಪೊಲೀಸ್ ಸಿಬ್ಬಂದಿಗಳ ವಸತಿಗೃಹದ ತಡೆಗೋಡೆ ಮನೆಯಂಗಳಕ್ಕೆ ಕುಸಿದ ಘಟನೆ ವಿಟ್ಲದ ಪೊನ್ನೋಟ್ಟು ಎಂಬಲ್ಲಿ ನಡೆದಿದೆ.
ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಗಳು ವಾಸ ಇರುವ ವಸತಿಗೃಹದ ಹಿಂಬದಿಯಲ್ಲಿದ್ದ ತಡೆಗೋಡೆ ಮತ್ತು ಗುಡ್ಡ ಒಮ್ಮೆಲೇ ಪಕ್ಕದಲ್ಲಿ ವಾಸ ಇರುವ ಆಯಿಷಾ ಪೊನ್ನೋಟ್ಟುರವರ ಮನೆಯ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿಯಾಗಿದೆ. ಇನ್ನಷ್ಟು ಮಣ್ಣುಗಳು ಕುಸಿಯುವ ಸಾಧ್ಯತೆ ಕಂಡು ಬಂದಿದೆ. ಅಪಾಯ ಸಂಭವಿಸುವ ಸಾಧ್ಯತೆಯ ಬಗ್ಗೆ ಈ ಹಿಂದೆಯೇ ಪಟ್ಟಣ ಪಂಚಾಯತ್ ಗೆ ಆಯಿಷಾರವರು ಮನವಿ ಸಲ್ಲಿಸಿದ್ದರು. ಆದರೆ ಯಾರೂ ಸ್ಪಂದನೆ ನೀಡಿರುವುದಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.