ನೆಲ್ಯಾಡಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ದ.ಕ ಮಂಗಳೂರು, ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ, ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟಿಕಲ್ ಮಂಗಳೂರು ಇದರ ಆಶ್ರಯದಲ್ಲಿ ರಾಷ್ಟ್ರೀಯ ನೇತ್ರದಾನ ಜಾಗೃತಿ ಅಭಿಯಾನ ನೇತ್ರದಾನದ ಬಗ್ಗೆ ಪ್ರದರ್ಶನ ಮತ್ತು ನೋಂದಣಿ ಕಾರ್ಯಕ್ರಮ ಹಾಗೂ ಉಚಿತ ಕಣ್ಣಿನ ತಪಾಸಣೆ, ಕಣ್ಣಿನ ಪೊರೆ ಚಿಕಿತ್ಸಾ ಶಿಬಿರ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆ.28ರಂದು ನಡೆಯಿತು.
ಕಣಚೂರು ಮೆಡಿಕಲ್ ಕಾಲೇಜಿನ ಮುಖ್ಯಸ್ಥರಾದ ಡಾ.ಬದ್ರಿನಾಥ್ ತಲ್ವಾರ್ ನೇತ್ರದಾನದ ಮಹತ್ವ ಹಾಗೂ ನೋಂದಾವಣೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಡಾ. ನವ್ಯಶ್ರೀ, ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್, ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಶಿಶಿರ ಎಂ.ಪಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ರಶೀದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಮಾರು 150 ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.