Puttur: ತ್ರೋಬಾಲ್ ಪಂದ್ಯಾಟ – ಪಾಂಗ್ಲಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪ್ರಥಮ

0

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಾಥಮಿಕ ಶಾಲಾ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಪುತ್ತೂರು ಪಾಂಗ್ಲಾಯಿ ಬೆಥನಿ ಆಂಗ್ಲ ಮಾದ್ಯಮ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
ದ್ವಿತೀಯ ಸ್ಥಾನವನ್ನು ಬಾಲಕರ ವಿಭಾಗದಲ್ಲಿ‌ ದರ್ಬೆಯ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಪಡೆದರೆ ಬಾಲಕಿಯರ ವಿಭಾಗದಲ್ಲಿ ಸಾಲ್ಮರದ ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಶಾಲೆ ಪಡೆದಿದೆ.

ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಪಾಂಗ್ಲಾಯಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ದ್ವಿತೀಯ ಸ್ಥಾನವನ್ನು ಸಾಲ್ಮರದ ಪ್ರೌಢಶಾಲೆಯು ಪಡೆದುಕೊಂಡಿದೆ. ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಪ್ರಥಮ ಪಾಂಗ್ಲಾಯಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಪಡೆದು ಸಾಲ್ಮರದ ಪ್ರೌಢಶಾಲೆ ದ್ವಿತೀಯ ಸ್ಥಾನವನ್ನು ಪಡೆದಿದೆ.

ಈ ನಾಲ್ಕು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ದರ್ಬೆ ಪಾಂಗ್ಲಾಯಿ ಬೆಥನಿ ಆಂಗ್ಲ ಮಾದ್ಯಮ ಶಾಲೆಯ ಮಕ್ಕಳ ಸಾಧನೆಗೆ ಪ್ರಶಂಸೆ ವ್ಯಕ್ತವಾಗಿದೆ. ಮಕ್ಕಳಿಗೆ ದೈಹಿಕ ಶಿಕ್ಷಕರಾದ ನಿರಂಜನ್, ಅಕ್ಷಯ್ ಮತ್ತು ಹರೀಶ್ ತರಬೇತಿ ನೀಡಿದ್ದಾರೆ. ಶಾಲಾ ಮುಖ್ಯೋಪಾಧ್ಯಾಯರಾದ ಭಗಿನಿ ಶಾಂತಿ ಬಿ.ಎಸ್ ಮತ್ತು ಭಗಿನಿ ಸೆಲಿನ್ ಪೆತ್ರಾರವರು ವಿದ್ಯಾರ್ಥಿಗಳಿಗೆ ಶುಭಹಾರೈಸಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here