ಲಿಟ್ಲ್ ಫ್ಲವರ್ ಶಾಲೆಯಲ್ಲಿ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

0

ಪುತ್ತೂರು :ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಮೂಹ ಸಂಪನ್ಮೂಲ ಕೇಂದ್ರ ಮತ್ತು ಲಿಟ್ಲ್ ಫ್ಲವರ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ “ಪ್ರತಿಭಾ ಶೋಧ ” ಆ.28 ರಂದು ನಡೆಯಿತು.


ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ ಎಸ್ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಮಂತ್ರಿ ಪೋಷಣ್ ಅಭಿಯಾನದ ಸಹಾಯಕ ನಿರ್ದೇಶಕ ವಿಷ್ಣು ಪ್ರಸಾದ್, ಶಿಕ್ಷಣ ಸಂಯೋಜಕ ಹರಿಪ್ರಸಾದ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ನಾಗೇಶ್ ಪಾಟಾಳಿ, ಲಿಟ್ಲ್ ಫ್ಲವರ್ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ ಭಟ್ ಹಾಗೂ ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷ ಸತೀಶ್ ಎಸ್ ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಲಿಟ್ಲ್ ಫ್ಲವರ್ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪುತ್ತೂರು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶಶಿಕಲಾ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ. ವೆನಿಶಾ ವಂದಿಸಿದರು. ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here