ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ (Indraprastha PU College) ವಿದ್ಯಾರ್ಥಿ ಮಹಮ್ಮದ್ ಮುಝಾಮಿಲ್ ರಾಷ್ಟ್ರೀಯ ಆಹಾರ ತಂತ್ರಜ್ಞಾನ ಸಂಸ್ಥೆಗೆ (National Institute of Food Technology) ಆಯ್ಕೆಯಾಗಿದ್ದಾರೆ. ತಂಜಾವೂರಿನ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮ ಶೀಲತೆ ಮತ್ತು ಉದ್ಯೋಗ (NIFTEM) ದೇಶದ ಪ್ರತಿಷ್ಠಿತ ಸಂಸ್ಥೆಯಾಗಿದೆ. ಇದು ಭಾರತ ಸರಕಾರದ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಅಡಿಯಲ್ಲಿ ಸಂಶೋಧನೆ ಮತ್ತು ಶಿಕ್ಷಣಕ್ಕಾಗಿರುವ ಪ್ರಮುಖ ಸಂಸ್ಥೆಯಾಗಿದೆ.
ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನಿರಂತರ ವರ್ಷಗಳಲ್ಲಿ ದೇಶದ ಹಲವಾರು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದು ಪ್ರಾಂಶುಪಾಲ ಎಚ್ ಕೆ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.