





ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅ.31ರಂದು ಪ್ರತಿಷ್ಠಾ ವರ್ಧಂತಿ ವೆ.ಮೂ. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ.


ಬೆಳಿಗ್ಗೆ ಪುಣ್ಯಾಹ, ಗಣಪತಿ ಹೋಮ, ನವಕಲಶಾರಾಧನೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆಯಾಗಲಿದೆ.





ಸಂಜೆ 5ರಿಂದ ಲಲಿತ ಸಹಸ್ರನಾಮ, ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ, ಮಂಗಳೂರು ಪ್ರಸಾರ ಭಾರತಿ ಆಕಾಶವಾಣಿಯ ‘ಎ’ ಗ್ರೇಡ್ ಕಲಾವಿದ ಡಾ ಪಿ.ಕೆ. ಗಣೇಶ್ ಮತ್ತು ಬಳಗದವರಿಂದ ಸ್ಯಾಕ್ಸೋಫೋನ್ ವಾದನ ನಡೆಯಲಿದೆ.
ಬಳಿಕ ರಾತ್ರಿ 8ಕ್ಕೆ ಮಹಾಪೂಜೆ, ಪ್ರಸಾದ ವಿತರಣೆಯಾಗಲಿದೆ ಎಂದು ಮಂದಿರದ ಪ್ರಕಟಣೆ ತಿಳಿಸಿದೆ.







