ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ:ಸ.ಹಿ.ಪ್ರಾ ಶಾಲೆ ಸಾಮೆತ್ತಡ್ಕ ಶಾಲೆಯ ವಿದ್ಯಾರ್ಥಿಗಳು ತಾ.ಮಟ್ಟಕ್ಕೆ

0

ಪುತ್ತೂರು: ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಇಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಮೆತ್ತಡ್ಕ “ಇಲ್ಲಿನ ವಿದ್ಯಾರ್ಥಿ ಗಳಾದ ಶಝ್ಮ ಫಾತಿಮಾ 4ನೇ ತರಗತಿ ಕಿರಿಯರ ವಿಭಾಗದ ಅರೇಬಿಕ್ ಧಾರ್ಮಿಕ ಪಠಣದಲ್ಲಿ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಹಾಗು ದೇಶ ಭಕ್ತಿ ಗೀತೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಹಾಗೂ 2ನೇ ತರಗತಿಯ ಪರೀಕ್ಷಿತ್ ಎಸ್‌ ಎನ್ ಈ ವಿದ್ಯಾರ್ಥಿಯು ಕಿರಿಯರ ವಿಭಾಗದ ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here