ಪುತ್ತೂರು : ಮಾಧ್ಯಮ (Media) ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ (Social Media) ಅರುಣ್ ಪುತ್ತಿಲರ ಕುರಿತಾಗಿ ಮಾನಹಾನಿ ಹಾಗೂ ತೇಜೋವಧೆ ಮಾಡುವ ವರದಿಗಳನ್ನು ಪ್ರಕಟಿಸದಂತೆ ಅರುಣ್ ಕುಮಾರ್ ಪುತ್ತಿಲ (Arun Kumar Puthila) ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ (City Civil Court)ನಿಂದ ತಡೆಯಾಜ್ಞೆ ತಂದಿದ್ದಾರೆ. ರಾಜಕೀಯವಾಗಿ ಸಂಚು ಮಾಡುಲಾಗುತ್ತಿದೆ ಎಂಬ ಹಿನ್ನಲೆಯಲ್ಲಿ ಅರುಣ್ ಪುತ್ತಿಲ ನ್ಯಾಯಾಲಯದ ಮೊರೆ ಹೋಗಿರುತ್ತಾರೆ.
ಮಹಿಳೆಯೊಂದಿಗೆ ಮಾತನಾಡುತ್ತಿರುವ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಕುಮಾರ್ ಪುತ್ತಿಲ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನಿಂದ (City Civil Court) ತಡೆಯಾಜ್ಞೆ ತಂದಿದ್ದಾರೆ.