Puttur: ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ

0

ಪುತ್ತೂರು: ನಾಟಕಗಳು ಶಾಲಾ ಹಂತದಿಂದಲೇ ಮೌಲ್ಯವನ್ನು ಬೆಳೆಸುವಲ್ಲಿ ಸಹಕಾರಿಯಾಗಿವೆ. ಆದ್ದರಿಂದ ಮಕ್ಕಳು ಸಂಗೀತ, ನೃತ್ಯ, ನಾಟಕಗಳಂತಹ ಪಠ್ಯಪೂರಕ ಕಲೆಗಳಲ್ಲಿ ಆಸಕ್ತಿ ಬೆಳೆಸಿಕೊಂಡು ತಮ್ಮಲ್ಲಿ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರೊಂದಿಗೆ ಸಮಾಜದಲ್ಲೂ ಅದನ್ನು ಪ್ರತಿಬಿಂಬಿಸುವ ವ್ಯಕ್ತಿತ್ವನ್ನು ಬೆಳೆಸಿಕೊಳ್ಳಬೇಕು ಎಂದು ಸರಕಾರಿ ಪ್ರೌಢಶಾಲೆ ಕೊಂಬೆಟ್ಟು ಇಲ್ಲಿನ ಪ್ರಾಂಶುಪಾಲ ವಸಂತ ಮೂಲ್ಯ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ (Vivekananda Kannada Medium School) ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಸಭೆಯಲ್ಲಿ ತೀರ್ಪುಗಾರರಾಗಿ ಆಗಮಿಸಿದ ಎ.ಎನ್ ಕೊಳಂಬೆ, ಡಾ. ಅನಿಲ ದೀಪಕ್ ಶೆಟ್ಟಿ, ಶಿಕ್ಷಣ ಇಲಾಖೆಯ ಸಂಯೋಜಕ ಅಮೃತಕಲಾ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯಗುರು ಆಶಾ ಬೆಳ್ಳಾರೆ ಉಪಸ್ಥಿತರಿದ್ದರು. ನಾಟಕ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ – ಪ್ರಥಮ, ಸುದಾನ ವಸತಿ ಶಾಲೆ – ದ್ವಿತೀಯ, ಸರಕಾರಿ ಪ್ರೌಢಶಾಲೆ ಕೊಂಬೆಟ್ಟು ತೃತೀಯ ಸ್ಥಾನ ಪಡೆದುಕೊಂಡರು. ಶಾಲಾ ಸಹಶಿಕ್ಷಕಿ ಗೀತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here