ಯೋಗಾಸನ : ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅದಿತಿ ಆರ್‌ ರೈ ರಾಜ್ಯಮಟ್ಟಕ್ಕೆ ಆಯ್ಕೆ

0

puttur: ಶಾಲಾ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ವಾಣಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ಇದರ ಸಹಯೋಗದೊಂದಿಗೆ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅದಿತಿ ಆರ್‌ರೈ ಇವರು ನಾಲ್ಕನೇ  ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ.

ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here