ಶಾಂತಿನಗರ ಸರಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದ ಪೂರ್ವಭಾವಿ ಸಭೆ

0

ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಸರಕಾರಿ ಪ್ರೌಢಶಾಲೆಯಲ್ಲಿ ಸೆ.14ರಂದು ನಡೆಯಲಿರುವ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟದ ಪೂರ್ವಭಾವಿ ಸಭೆ ಪ್ರೌಢಶಾಲಾ ಸಭಾಂಗಣದಲ್ಲಿ ಸೆ.1ರಂದು ನಡೆಯಿತು.


ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಕಾಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ವಿಷ್ಣುಪ್ರಸಾದ್, ಗ್ರಾ.ಪಂ. ಸದಸ್ಯ ರಾಮಚಂದ್ರ ಪೂಜಾರಿ ಶಾಂತಿನಗರ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿನೇಶ್ ಜೇಡರಪಾಲು ಮತ್ತು ಹಿರಿಯ ವಿದ್ಯಾರ್ಥಿಯಾಗಿರುವ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಯತೀಶ್ ಕುಮಾರ್ ಬಾರ್ತಿಕುಮೇರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕಿ ನಿರ್ಮಲ ರೋಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಲಿಂಗಪ್ಪ, ಧನಲಕ್ಷ್ಮಿ ಮತ್ತು ದೀಪ ಸಹಕರಿಸಿದರು. ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು ಮತ್ತು ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here