ನಿಡ್ಪಳ್ಳಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಪುತ್ತೂರು ಬೆಟ್ಟಂಪಾಡಿ ವಲಯದ ನಿಡ್ಪಳ್ಳಿ ಒಕ್ಕೂಟದ ತ್ರೈಮಾಸಿಕ ಸಭೆ ನಿಡ್ಪಳ್ಳಿ ಪ್ರಾಥಮಿಕ ಶಾಲೆಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಸತೀಶ್. ಎಂ ಇವರ ಅಧ್ಯಕ್ಷತೆಯಲ್ಲಿ ಸೆ.1 ರಂದು ನಡೆಯಿತು.
ಒಕ್ಕೂಟದ ಸೇವಾ ಪ್ರತಿನಿಧಿ ಶಾಲಿನಿ.ಕೆ ಸಂಘದ ಸದಸ್ಯರಿಗೆ ಮಾಹಿತಿ ನೀಡಿದರು. ವಲಯ ಮೆಲ್ವೀಚಾರಕ ಸೋಹನ್. ಜಿ ಯೋಜನೆಯ ನಿಯಮ, ಪಿ.ಅರ್.ಕೆ ಮೊತ್ತದಲ್ಲಿ ಆದ ಬದಲಾವಣೆ ಮತ್ತು ಕೆಲವು ಉಪಯುಕ್ತ ಮಾಹಿತಿ ನೀಡಿದರು.
ಆರೋಗ್ಯ ಮಾಹಿತಿ ; ಪಾಣಾಜೆ ಪ್ರಾಥಮಿಕ ಅರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಕುಸುಮಾವತಿ ಎ.ವಿ ಟಿ.ಬಿ ಕಾಯಿಲೆಯ ಲಕ್ಷಣಗಳು ಮತ್ತು ಅದರ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ, ದುಶ್ಚಟಗಳಿಗೆ ಬಲಿಯಾಗದಂತೆ ಮಾಹಿತಿ ನೀಡಿದರು.
ಆರೋಗ್ಯ ಕೇಂದ್ರದ ಸಿ.ಎಚ್.ಒ ಲಕ್ಷ್ಮೀ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಕ್ಕೂಟದ ಜತೆ ಕಾರ್ಯದರ್ಶಿ ಹೇಮಾ. ಸಿ.ಎಚ್ ಸ್ವಾಗತಿಸಿ ಕಾರ್ಯದರ್ಶಿ ಶ್ರೀಮತಿ ಒಕ್ಕೂಟದ ವರದಿ ವಾಚಿಸಿದರು. ಜವಾಬ್ದಾರಿ ತಂಡಗಳಾದ ಶಿವಶ್ರೀ ತಂಡದ ಕುಸುಮ.ಸಿ.ಎಚ್ ಹಾಗೂ ಸಿದ್ದಿವಿನಾಯಕ ತಂಡದ ಐತ್ತಪ್ಪ ತಂಡದ ವರದಿ ವಾಚಿಸಿದರು.ಕಾವೇರಿ.ಡಿ ವಂದಿಸಿದರು.ಒಕ್ಕೂಟದ ಕೋಶಾಧಿಕಾರಿ ತಿಮ್ಮಪ್ಪ ಸಹಕರಿಸಿದರು.ಒಕ್ಕೂಟದ ಸದಸ್ಯರು ಪಾಲ್ಗೊಂಡರು.