ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ಒಂದು ವಾರಗಳ ಕಾಲ ನಡೆಯುವ ತರಬೇತಿ ಸಪ್ತಾಹದ ಉದ್ಘಾಟನಾ ಸಮಾರಂಭ ಆ.25ರಂದು ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು.
ಜನಜಾಗೃತಿ ವೇದಿಕೆಯ ಜಿಲ್ಲಾ ತರಬೇತುದಾರ ಗಣೇಶ್ ಆಚಾರ್ಯ ಅವರು ತರಬೇತಿ ಸಪ್ತಾಹ ಉದ್ಘಾಟಿಸಿ ಮಾತನಾಡಿ, ಸ್ವಸ್ಥ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ತರಬೇತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಲ್ಯಾಡಿ ಜೆಸಿಐ ಅಧ್ಯಕ್ಷೆ ಸುಚಿತ್ರಾ ಜೆ ಬಂಟ್ರಿಯಾಲ್ ವಹಿಸಿದ್ದರು.
ವೇದಿಕೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮೇದಪ್ಪ, ಸಂತಜಾರ್ಜ್ ಪ.ಪೂ.ಕಾಲೇಜಿನ ಪ್ರಾಂಶುಪಾಲ ಏಲಿಯಾಸ್, ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್, ನೆಲ್ಯಾಡಿ ಒಕ್ಕೂಟದ ಅಧ್ಯಕ್ಷ ಭಾಸ್ಕರ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಜೇಸಿಐನ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.