ಪುತ್ತೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕು, ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪುತ್ತೂರು ಇದರ ಆಶ್ರಯದಲ್ಲಿ ಕೃಷಿಕರ ಪ್ರಗತಿಬಂಧು ಸಂಘಗಳಿಗೆ ಕೃಷಿ ಸಲಕರಣೆ ಹಾಗೂ ವಿದ್ಯಾರ್ಥಿಗಳಿಗೆ ಸುಜ್ಞಾನಿಧಿ ಶಿಷ್ಯವೇತನ ಮಂಜೂರಾತಿ ಪತ್ರಗಳ ವಿತರಣಾ ಕಾರ್ಯಕ್ರಮ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.
ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಿ 36 ಪ್ರಗತಿಬಂಧು ಸಂಘದ ಸದಸ್ಯರಿಗೆ ರೂ.2500 ಮೌಲ್ಯದ ಕೃಷಿ ಸಲಕರಣೆ ವಿತರಿಸಿ ಮಾತನಾಡಿ ಶ್ರೀಕ್ಷೇತ್ರ ಧರ್ಮಸ್ಥಳದ ಯಾವುದೇ ಕಾರ್ಯಕ್ರಮವು ಸಮಾಜದ ಪ್ರತಿಯೊಬ್ಬರಿಗೂ ತಲುಪುವಂತಹ ಕಾರ್ಯಕ್ರಮವಾಗಿದೆ ಎಂದು ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳದಿಂದ 196 ವಿದ್ಯಾರ್ಥಿಗಳಿಗೆ ಮಂಜೂರಾದ ಶಿಷ್ಯವೇತನದ ಮಂಜೂರಾತಿ ಪತ್ರವನ್ನು ಶಾಸಕರು ವಿತರಿಸಿದರು.
ಪುತ್ತೂರು ತಹಶೀಲ್ದಾರ್ ಪುರಂದರ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಕೇಂದ್ರ ಕಚೇರಿ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕ ಆಂಜನೇಯ ರೆಡ್ಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಹಾಗೂ ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ದಿಕ್ ನೀರಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ತಾಲೂಕಿನ ಯೋಜನಾಧಿಕಾರಿ ಶಶಿಧರ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಕೃಷಿ ಮೇಲ್ವಿಚಾರಕ ಶಿವರಂಜನ್ ಕಾರ್ಯಕ್ರಮ ನಿರೂಪಿಸಿದರು. ಕಾವ್ಯಶ್ರೀ ವಂದಿಸಿದರು. ಸಂಘದ ಸದಸ್ಯರು ವಿದ್ಯಾರ್ಥಿಗಳು ಭಾಗವಹಿಸಿದ್ದರು.