ಕಡಬ ವಲಯ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ತ್ರೋಬಾಲ್-ಬಾಲಕರ ವಿಭಾಗದಲ್ಲಿ ರಾಮಕುಂಜೇಶ್ವರ ಆ.ಮಾ.ಶಾಲಾ ತಂಡ ಪ್ರಥಮ ಸ್ಥಾನ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸಂತ ಜೋಕಿಮ್ಸ್ ಆಂಗ್ಲ ಮಾಧ್ಯಮ ಶಾಲೆ ಕಡಬ ಇದರ ಜಂಟಿ ಆಶ್ರಯದಲ್ಲಿ ಆ.28ರಂದು ಕಡಬ ಸಂತ ಜೋಕಿಮ್ಸ್ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಕಡಬ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.


ಇವರಿಗೆ ಸಂಸ್ಥೆಯ ಕಾರ‍್ಯದರ್ಶಿ ಕೆ.ಸೇಸಪ್ಪ ರೈ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ, ರಾಘವ್ ಹಾಗೂ ದಿವ್ಯ ಪಿ.ಎನ್ ರವರು ತರಬೇತಿ ನೀಡಿರುತ್ತಾರೆ. ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್ ಟಿ, ವ್ಯವಸ್ಥಾಪಕ ರಮೇಶ್ ರೈ ಆರ್ ಬಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here