ಬೆಟ್ಟಂಪಾಡಿ: ಬೀದರ್ ನಲ್ಲಿ ನಡೆದ ಅಖಿಲ ಭಾರತೀಯ ಸಂಸ್ಥಾನ್ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ಪ್ರಾಂತ (ರಾಜ್ಯ) ಮಟ್ಟದ ಅತ್ಲೆಟಿಕ್ ಕ್ರೀಡಾಕೂಟ 2024-25 ನೇ ಸಾಲಿನ ಕ್ರೀಡಾಕೂಟದಲ್ಲಿ ಬೆಟ್ಟಂಪಾಡಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯ 9 ನೇ ತರಗತಿ ವಿದ್ಯಾರ್ಥಿನಿ ಧನ್ವಿ ಎ.ಎಂ. ಭಾಗವಹಿಸಿ 600 ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ದಕ್ಷಿಣ ಮಧ್ಯಕ್ಷೇತ್ರದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಈಕೆ ಪಟ್ಟೆ ಅಲಂತಡ್ಕ ನಿವಾಸಿ ಮೋಹನಚಂದ್ರ ಮತ್ತು ಉಷಾ ದಂಪತಿಯ ಪುತ್ರಿಯಾಗಿದ್ದಾರೆ.