ಶಟಲ್‌ ಬ್ಯಾಡ್ಮಿಂಟನ್‌- ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

0

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ  ಹಾಗೂ ಅಂಬಿಕಾ ಪದವಿಪೂರ್ವ ಕಾಲೇಜು, ಪುತ್ತೂರು ಇದರ ಸಹಯೋಗದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಶಟಲ್‌ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಭಾಗವಹಿಸಿ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದಿರುತ್ತದೆ. ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

   ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಹರ್ಷಿತಾ, ಅಹನಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಪುಲಕಿತ, ನೇಹಶ್ರೀ ಭಾಗವಹಿಸಿದ್ದರು. ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನ್ವಿತ್‌ ರೈ, ಅಕ್ಷಯ್‌ ನಾಯಕ್ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿ ಯಶಸ್‌.ಎಚ್‌. ರಜನಿ, ಯಶಸ್ವಿನ್‌. ಡಿ ಭಾಗವಹಿಸಿದ್ದರು. ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here