ಸುಳ್ಯಪದವು ಸರ್ವೋದಯ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

0

ಬಡಗನ್ನೂರು: ಸುಳ್ಯಪದವು ಸರ್ವೋದಯ ಪ್ರೌಢಶಾಲೆಯಲ್ಲಿ ಆ.29 ರಂದು ರಾಷ್ಟ್ರೀಯ ಕ್ರೀಡಾದಿನ ಆಚರಣೆ ಮಾಡಲಾಯಿತು.

ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ ಬಡಗನ್ನೂರು ಗ್ರಾ.ಪಂ ಸದಸ್ಯ  ವೆಂಕಟೇಶ್ ಕನಡ್ಕ ಕ್ರೀಡಾ ದಿನ ಉದ್ಘಾಟಿಸಿದರು. ಹಿರಿಯ ವಿದ್ಯಾರ್ಥಿನಿ ಕ್ರೀಡಾಪಟು ರಮಾಕಾಂತಿ ವಿದ್ಯಾರ್ಥಿಗಳಿಗೆ ಕ್ರೀಡಾ ಮಹತ್ವ ತಿಳಿಸಿ ಶುಭ ಹಾರೈಸಿದರು.

ವಿವಿಧ ಕ್ರೀಡೆಗಳ ಮೂಲಕ ಕ್ರೀಡಾದಿನವನ್ನು ಆಚರಿಸಲಾಯಿತು. ಸಂಸ್ಥೆಯ ಮುಖ್ಯ ಗುರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಸುಖೇಶ್ ರೈ ಕ್ರೀಡೆಯಲ್ಲಿ ಮಕ್ಕಳಿಗೆ ಇದೆ ಉಜ್ವಲ ಭವಿಷ್ಯ ಹಾಗೂ ಕ್ರೀಡಾಪಟುಗಳಿಗೆ ನಮ್ಮ ಗ್ರಾಮೀಣ ಶಾಲೆಯ ಪ್ರತಿಭೆಗಳು ಮುನ್ನೆಲೆಗೆ ಬರುತ್ತಿವೆ ಎಂದರು.ಶಿಕ್ಷಕ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here