ಪುತ್ತೂರು: ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ, ಪುತ್ತೂರು ಹಾಗೂ ಆರ್ಟ್ ಆಫ್ ಲಿವಿಂಗ್, ಪುತ್ತೂರು ಜಂಟಿಯಾಗಿ ಆಯೋಜಿಸಿದ ‘ಆನಂದೋತ್ಸವ ಶಿಬಿರ – ವಿದ್ಯಾರ್ಥಿ ಶಿಕ್ಷಕ ವಿಶೇಷ’ ಯೋಗ ಸರ್ಟಿಫಿಕೇಟ್ ಕೋರ್ಸ್ ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೆ.3ರಂದು ಉದ್ಘಾಟನೆಗೊಂಡಿತು.
ದೀಪ ಬೆಳಗಿಸಿ ಉದ್ಘಾಟಿಸಿದ ಪುತ್ತೂರು ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನ್ ಭೋಗ್, ಯೋಗದ ಪ್ರಾಮುಖ್ಯತೆ ಬಗ್ಗೆ ಶಿಬಿರಾರ್ಥಿಗಳಿಗೆ ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಯೋಗ ಶಿಕ್ಷಕಿ ಶರಾವತಿ ರವಿನಾರಾಯಣ, ಶಿಕ್ಷಕರಲ್ಲಿ ಯೋಗ ಕೌಶಲ್ಯದ ಅಗತ್ಯತೆ ಹಾಗೂ ನಿತ್ಯ ಜೀವನದಲ್ಲಿ ಯೋಗಾಭ್ಯಾಸದ ಮಹತ್ವದ ಕುರಿತು ಅರಿವು ಮೂಡಿಸಿದರು.
ಇದೇ ಸಂದರ್ಭದಲ್ಲಿ ಗಂಗಮ್ಮ ಎಚ್ ಶಾಸ್ತ್ರಿ, ಆಡಳಿತ ಮಂಡಳಿ ಸಂಚಾಲಕರು, ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ, ಇವರು ಶಿಬಿರಾರ್ಥಿಗಳಿಗೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾl ಶೋಭಿತಾ ಸತೀಶ್ ಸ್ವಾಗತಿಸಿ, ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿ ಅಕ್ಷಯ್ ನವೀನ ವಂದಿಸಿದರು. ಪ್ರಶಿಕ್ಷಣಾರ್ಥಿ ಸುನಯನ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಭೋದಕ -ಭೋದಕೇತರ ಸಿಬ್ಬಂದಿ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.