ತಾ|ಮಟ್ಟದ ಫುಟ್ಬಾಲ್ ಪಂದ್ಯಾಟ: ಸಂತ ಫಿಲೋಮಿನಾ ಪ್ರೌಢಶಾಲೆ ಜಿಲ್ಲಾಮಟ್ಟಕ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯ ಕಚೇರಿ ಪುತ್ತೂರು, ಇವರ ಆತಿಥ್ಯದಲ್ಲಿ ವಿವೇಕಾನಂದ ಕಾಲೇಜು ಫುಟ್ಬಾಲ್ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪ್ರೌಢಶಾಲೆ 17ರ ವಯೋಮಿತಿಯ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಬಜ್ಪೆ ಮಾರ್ನಿಂಗ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯುವ ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.

ವಿಜೇತ ತಂಡದ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕ ಲಾರೆನ್ಸ್ ಮಸ್ಕರೇನಸ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿ. ಡಿಕಾಸ್ಟ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗನ್ನೀವಾಸ್ ರಾವ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಸೌಮ್ಯ ಭಟ್, ನಿವೃತ ಚಿತ್ರಕಲಾ ಶಿಕ್ಷಕ ಎಂ.ಎಸ್ ಪುರುಷೋತ್ತಮ್, ಶಾಲಾ ಮುಖ್ಯಗುರು ಮ್ಯಾಕ್ಸಿಮ್ ಡಿಸೋಜಾ ಹಾಗೂ ಶಿಕ್ಷಕರು ಅಭಿನಂದಿಸಿ ಶುಭಹಾರೈಸಿದರು.

LEAVE A REPLY

Please enter your comment!
Please enter your name here