ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಮಂಗಳೂರು ಹಾಗೂ ಅಂಬಿಕಾ ಪ. ಪೂ ಕಾಲೇಜು ನೆಲ್ಲಿಕಟ್ಟೆ, ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಆ.31 ರಂದು ಸುಧಾನ ಸ್ಪೋರ್ಟ್ಸ್ ಕ್ಲಬ್ ಸಾಮೆತಡ್ಕ ಪುತ್ತೂರಿನಲ್ಲಿ ನಡೆದ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಬಾಲಕರ ವಿಭಾಗವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ದ್ವಿತೀಯ ವಾಣಿಜ್ಯ ವಿಭಾಗದ ಲಿಖಿತ್ ಎಚ್.ಎಂ, ಅಂಜನ್ ಗೌಡ ಜಿ.ಬಿ, ದ್ವಿತೀಯ ವಿಜ್ಞಾನ ವಿಭಾಗದ ಅಕ್ಷಯ್ ವೈ, ಕುಮಾರಸ್ವಾಮಿ ಎಚ್. ಎಮ್, ಪ್ರಥಮ ವಾಣಿಜ್ಯ ವಿಭಾಗದ ತೇಜಸ್ ಎಸ್. ಕೆ ಇವರು ಉಜಿರೆ ಶ್ರೀ ಧ. ಮಂಜುನಾಥೇಶ್ವರ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.