ಪುತ್ತೂರು: ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮಗಳು ಶಾಲೆಗಳಲ್ಲಿ ನಡೆಯುವಂತಾಗಬೇಕು. ಇದಕ್ಕೆ ಪೂರಕವಾಗಿ ಅವನಿ ಇಕೋ ಕ್ಲಬ್ ನಮ್ಮ ಶಾಲೆಯಲ್ಲಿ ಉದ್ಘಾಟನೆಗೊಳ್ಳುತ್ತಿರುವುದು ಹಾಗೂ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ವತಿಯಿಂದ ಶಾಲೆಗೆ ಡಸ್ಟ್ ಬಿನ್ಗಳ ಹಸ್ತಾಂತರ ಆಗಿರುವುದು ಸಂತಸದ ವಿಚಾರ ಎಂದು ಶಾಲಾ ಎಸ್ಡಿಎಂಸಿ ಅಧ್ಯಕ್ಷ ರಮೇಶ್ ಗೌಡ ಪಜಿಮಣ್ಣು ಹೇಳಿದರು.
ಅವರು ಮಂಡೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅವನಿ ಇಕೋ ಕ್ಲಬ್ ಇದರ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಅಧ್ಯಕ್ಷೆ ವೇದಾವತಿ ರಾಜೇಶ್ ಶಾಲೆಗೆ ಎರಡು ಉತ್ತಮ ಗುಣಮಟ್ಟದ ಡಸ್ಟ್ ಬಿನ್ಗಳನ್ನು ಹಸ್ತಾಂತರ ಮಾಡಿ ಇಕೋ ಕ್ಲಬ್ನ್ನು ಅಧಿಕೃತವಾಗಿ ಉದ್ಘಾಟನೆ ಮಾಡಿ ಶುಭ ಕೋರಿದರು.
ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಕಾರ್ಯದರ್ಶಿ ಹಾಗೂ ವಿದ್ಯಾಮಾತಾ ಅಕಾಡೆಮಿ ಇದರ ಸಂಚಾಲಕರಾದ ಭಾಗ್ಯೇಶ್ ರೈ ಅವರು ಇಕೋ ಕ್ಲಬ್ನ ಮುಂದಿನ ಕಾರ್ಯ ಚಟುವಟಿಕೆಗಳಿಗಾಗಿ ವೈಯಕ್ತಿಕವಾಗಿ 3 ಸಾವಿರ ರೂ. ದೇಣಿಗೆ ನೀಡಿ ಶುಭ ಕೋರಿದರು.ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಗುರು ವಿಜಯ ಪಿ ಪ್ರಾಸ್ತಾವಿಕ ಮಾತುಗಳ ಮೂಲಕ ಸ್ವಾಗತಿಸಿದರು. ಸಹ ಶಿಕ್ಷಕಿ ಮೂಕಾಂಬಿಕಾ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ವನಿತಾ ಬಿ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.