ಕಡಬ ಸೈಂಟ್ ಆನ್ಸ್ ಶಾಲೆಯಲ್ಲಿ ಕಡಬ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟ

0

ಕಡಬ. ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾಂಗಣದಲ್ಲಿ ಕಡಬ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟ ನಡೆಯಿತು.


ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡೆ ಮಾತ್ರವಲ್ಲದೆ ಸೌಹಾರ್ದ ಸಹಬಾಳ್ವೆಯನ್ನು ಬೆಳೆಸುವಂತಹ ಶಿಕ್ಷಣವನ್ನು ನೀಡಬೇಕು. ಮಕ್ಕಳಿಗೆ ಆ ಕುಲ ಈ ಕುಲ ಎಂದು ತಿಳಿಸದೆ ನಾವೆಲ್ಲಾ ಒಂದೇ ಮಾನವ ಕುಲ ಎಂಬುದನ್ನು ಬೋಧಿಬೇಕು. ಮಕ್ಕಳು ಇಂದಿನ ಆರೋಗ್ಯದ ಪರಿಸ್ಥಿತಿಯಲ್ಲಿ ಆದಷ್ಟು ತಮ್ಮನ್ನು ತಾವು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಂತ ಫಿಲೋಮಿನ ಶಾಲೆ ಉಪ್ಪಿನಂಗಡಿ ಇಲ್ಲಿನ ನಿವೃತ್ತ ಮುಖ್ಯ ಗುರು ವಿನ್ಸೆಂಟ್ ಫೆರ್ನಾಂಡಿಸ್ ಹೇಳಿದರು.


ಅವರು ಕಡಬದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಆತಿಥ್ಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಆಶ್ರಯದಲ್ಲಿ ಕಡಬದ ಸೈಂಟ್ ಜೋಕಿಮ್ ಸಭಾಂಗಣದಲ್ಲಿ ಜರಗಿದ ಕಡಬ ಪ್ರಾಥಮಿಕ ವಲಯ ಮಟ್ಟದ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.
ಕಡಬ ತಾಲೂಕು ಪ್ರಾಥಮಿಕ ವಿಭಾಗದ ದೈಹಿಕ ಶಿಕ್ಷಣ ನೋಡಲ್ ಅಧಿಕಾರಿ ಚಂದ್ರಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿ ಪಂದ್ಯಾಟ ಆಯೋಜಕರಿಗೆ ಅಭಿನಂದಿಸಿ ಸ್ಪರ್ಧಾಳಿಗಳಿಗೆ ಶುಭ ಹಾರೈಸಿದರು.


ಕಡಬ ತಾಲೂಕು ಪ್ರೌಢಾಶಾಲಾ ವಿಭಾಗದ ದೈಹಿಕ ಶಿಕ್ಷಣ ನೋಡಲ್ ಅಧಿಕಾರಿ ಲೋಕೇಶ್ ಮಾತನಾಡಿ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ವಿದ್ಯಾ ಸಂಸ್ಥೆಯ ಸಂಚಾಲಕರು ವಂ.ಪ್ರಕಾಶ್ ಪೌಲ್ ಡಿಸೋಜಾ ಕ್ರೀಡಾ ಸ್ಪರ್ಧೆಗಳು ಸೋಲು ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುವಂತೆ ಸಿದ್ಧಗೊಳಿಸುತ್ತದೆ ಎಂದು ಹೇಳಿದರು.


ವೇದಿಕೆಯಲ್ಲಿ ಪ್ರಭಾರ ಸಿ.ಆರ್.ಪಿ.ಗಣೇಶ್ ನಡುವಾಳ್ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಗಿರಿಧರ್ ರೈ ಸೈಂಟ್ ಜೋಕಿಮ್ಸ್ ಪ.ಪೂ.ಕಾಲೇಜಿನ ಪ್ರಾಂಶುಪಾಲ ಕಿರಣ್ ಕುಮಾರ್
ಪ್ರೌಢ ಶಾಲೆಯ ಶ್ರೀಲತಾ ಸೈಂಟ್ ಆನ್ಸ್ ನ ದಕ್ಷ ಅವರುಗಳು ಉಪಸ್ಥಿತರಿದ್ದರು. ಸಂಸ್ಥೆಯ ಸಂಚಾಲಕರು ಎಲ್ಲಾ ದೈಹಿಕ ಶಿಕ್ಷಕರಿಗೆ ಹೂವು ನೀಡಿ ಕಾರ್ಯಕ್ರಮಕ್ಕೆ ಸ್ವಾಗತಿಸಿದರು.
ಸೈಂಟ್ ಆನ್ಸ್ ಶಾಲೆಯ ಪ್ರಾಂಶುಪಾಲರಾದ ವಂ. ಅಮಿತ್ ಪ್ರಕಾಶ್ ರೋಡ್ರಿಗಸ್ ಸ್ವಾಗತಿಸಿ, ದೈಹಿಕ ಶಿಕ್ಷಕಿ ಸುಪ್ರಿಯಾ ವಂದಿಸಿದರು. ಕಾರ್ಯಕ್ರಮವನ್ನು ಶಿಕ್ಷಕಿ ಲೋಲಾಕ್ಷಿ ನಿರೂಪಿಸಿದರು.

LEAVE A REPLY

Please enter your comment!
Please enter your name here