ಸೆ.8: ಉಚಿತ ಹೋಮಿಯೋಪತಿ ಚಿಕಿತ್ಸಾ ಶಿಬಿರ

0

ಪುತ್ತೂರು: ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಪುತ್ತೂರು, ರೋಟರಿ ಕ್ಲಬ್ ಪುತ್ತೂರು, ಪ್ರಗತಿ ಪ್ಯಾರಾಮೆಡಿಕಲ್ ರೋಟರ್‍ಯಾಕ್ಟ್ ಕ್ಲಬ್ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಹೋಮಿಯೋಪತಿ ಚಿಕಿತ್ಸಾ ಶಿಬಿರ ಶ್ರೀ ಸತ್ಯ ಸಾಯಿ ಮಂದಿರದ ವಠಾರದಲ್ಲಿ ಸೆ.8ರ ಆದಿತ್ಯವಾರ ಪೂ.9.೦೦ ರಿಂದ 12.೦೦ ರ ವರೆಗೆ ನಡೆಯಲಿದೆ. ದಾಖಲಾತಿಯು ಪೂರ್ವಾಹ್ನ 8.30ರಿಂದ 11.30ರ ತನಕ ನಡೆಯಲಿದ್ದು, ಮೊದಲು ಬಂದ 40 ಮಂದಿಗೆ ಮಾತ್ರ ಅವಕಾಶವಿರುತ್ತದೆ. ಶಿಬಿರದಲ್ಲಿ ತಪಾಸಣೆ ಹಾಗೂ ಔಷಧಿ ಉಚಿತವಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಕಾರ್ಯಕ್ರಮದ ಸಂಘಟಕರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here