ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯತ್‌ನ 2023-24ನೇ ಸಾಲಿನ ಜಮಾಬಂಧಿ ಸಭೆಯು ಸೆ.4ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪ್ರಭಾರ ಸಹಾಯಕ ನಿರ್ದೇಶಕರಾದ ಶೈಲಜ ಭಟ್‌ರವರು ಜಮಾಬಂಧಿ ಅಧಿಕಾರಿಯಾಗಿ ಸಭೆ ನಡೆಸಿಕೊಟ್ಟರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಮಿತಾ ಎ.ಕೆ ಜಮಾಖರ್ಚು ಮಂಡಿಸಿದರು. ವಿಷಯ ನಿರ್ವಾಹಕರಾದ ಪ್ರವೀಣ್ ಕೆ ಮತ್ತು ಸುರೇಶ್ ಪೂಜಾರಿ ಲೆಕ್ಕ ತಪಾಸಣೆ ನಡೆಸಿದರು. ವೇದಿಕೆಯಲ್ಲಿ ಗ್ರಾ.ಪಂ ಅಧ್ಯಕ್ಷ ಶರತ್ ಕುಮಾರ್ ಮಾಡಾವು, ಉಪಾಧ್ಯಕ್ಷೆ ಸುಮಿತ್ರಾ ಪಲ್ಲತ್ತಡ್ಕ ಉಪಸ್ಥಿತರಿದ್ದರು.
ಸಭೆಯಲ್ಲಿ ಗ್ರಾಪಂ ಸದಸ್ಯರುಗಳಾದ ಅಬ್ದುಲ್ ಖಾದರ್ ಮೇರ್ಲ, ಜಯಂತ ಪೂಜಾರಿ ಕೆಂಗುಡೇಲು, ತಾರಾನಾಥ ಕಂಪ, ವಿಜಯ ಕುಮಾರ್ ಸಣಂಗಳ, ಶೇಷಪ್ಪ ದೇರ್ಲ, ಬಟ್ಯಪ್ಪ ರೈ ದೇರ್ಲ, ಗಿರಿಜಾ ಕಣಿಯಾರು, ಜಯಂತಿ ಎಸ್.ಭಂಡಾರಿ, ಮೀನಾಕ್ಷಿ ವಿ.ರೈ, ಸುಭಾಷಿಣಿ, ನೆಬಿಸಾ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಪಂ ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿಗಳಾದ ರಾಕೇಶ್, ಶಿವಪ್ರಸಾದ್, ಧರ್ಮಣ್ಣ, ಮಾಲತಿ, ಜ್ಯೋತಿ, ರಫೀಕ್ ತಿಂಗಳಾಡಿ ಸಹಕರಿಸಿದ್ದರು.