ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್ ಶಿಪ್‌ನಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿನಿ ಪ್ರಥಮ

0

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಹಿತಾಲಿ ಪ್ರಸನ್ನ ಶೆಟ್ಟಿ ಇವರು ಬೀದರ್‌ನ ನೆಹರು ಮೈದಾನದಲ್ಲಿ ಭಾನುವಾರ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಅಥ್ಲೇಟಿಕ್‌ನ 16 ವಯೋಮಿತಿ ಒಳಗಿನ (ಕಿಶೋರವರ್ಗ) ಸ್ಪರ್ಧೆಯಲ್ಲಿ ಭಾಗವಹಿಸಿ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಪ್ರಸನ್ನ ಶೆಟ್ಟಿ ಮತ್ತು ಪ್ರತಿಮಾ ಶೆಟ್ಟಿ ದಂಪತಿಯವರ ಮಗಳಾಗಿರುತ್ತಾರೆ.

LEAVE A REPLY

Please enter your comment!
Please enter your name here