




ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ವತಿಯಿಂದ ಕರ್ನಾಟಕ ಪಬ್ಲಿಕ್ ಶಾಲೆ, ಕೆಯ್ಯೂರಿನಲ್ಲಿ ಸೆ.4ರಂದು ನಡೆದ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಯ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಶಾಲಾ ಸಂಚಾಲಕ ಭಾಸ್ಕರ್ ಆಚಾರ್ ಹಿಂದಾರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಜಯಮಾಲಾ .ವಿ .ಎನ್ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ್ ಹಾಗೂ ಕುಮಾರಿ ಸುದೀಕ್ಷಾ ಇವರುಗಳು ತರಬೇತಿ ನೀಡಿದ್ದಾರೆ.










