ನಾಳೆ (ಸೆ.7): ಇಚ್ಲಂಪಾಡಿಯಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

0

ನೆಲ್ಯಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇಚ್ಲಂಪಾಡಿ ಮತ್ತು ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರ ಆಡಳಿತ ಸಮಿತಿ ನೇರ್ಲ ಇಚ್ಲಂಪಾಡಿ ಇವುಗಳ ಸಹಭಾಗಿತ್ವದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.7ರಂದು ಇಚ್ಲಂಪಾಡಿ ನೇರ್ಲ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ನಡೆಯಿತು.


ಬೆಳಿಗ್ಗೆ 5.30ರಿಂದ ದೇವತಾ ಪ್ರಾರ್ಥನೆ, ಪುಣ್ಯಾಹ ವಾಚನ, ಗಣಹೋಮ ನಡೆದು ಬೆಳಿಗ್ಗೆ 7.32ಕ್ಕೆ ಕನ್ಯಾ ಲಗ್ನದ ಸುಮೂರ್ತದಲ್ಲಿ ಶ್ರೀ ಗಣಪತಿ ದೇವರ ಪ್ರತಿಷ್ಠೆ ನಡೆದು 8.30ರಿಂದ ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.

ಧಾರ್ಮಿಕ ಸಭೆ:
ಬೆಳಿಗ್ಗೆ 10.30ಕ್ಕೆ ಧಾರ್ಮಿಕ ಸಭೆ ನಡೆಯಲಿದ್ದು ಯುವ ಅಧ್ಯಯನಕಾರ ದೇವಿಪ್ರಸಾದ್ ಪಿ.ಪೊಯ್ಯತ್ತಡ್ಡ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶುಭಾಕರ ಹೆಗ್ಗಡೆ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಾದ ಮಧುಕುಮಾರ್ ನಾಯರ್ ಮಾನಡ್ಕ, ಚಂದ್ರಶೇಖರ ಗೌಡ ಕೋಟಿಪಾಲು, ಕಡಬ ಮೆಸ್ಕಾಂ ಎಇಇ ಸಜಿಕುಮಾರ್, ಪವರ್‌ಮ್ಯಾನ್‌ಗಳಾದ ಶರಣಪ್ಪ, ಸಂಜು ಅವರಿಗೆ ಸನ್ಮಾನ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಶ್ರೀ ದೇವರ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ನೇರ್ಲ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಬಳಿಕ ಎಂ.ಎಫ್.ಸಿ.ಇಚ್ಲಂಪಾಡಿ ಇವರಿಂದ ನಾಸಿಕ್ ಬ್ಯಾಂಡ್ ಪ್ರದರ್ಶನ ನಡೆಯಲಿದೆ. ಸಂಜೆ 3ರಿಂದ ಶ್ರೀ ಮಹಾಗಣಪತಿ ದೇವರ ಭವ್ಯ ಶೋಭಾಯಾತ್ರೆ ನಡೆಯಲಿದೆ ಎಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಶಶಿಧರ ಪೂಜಾರಿ ಪೊಯ್ಯತ್ತಡ್ಡ, ಕಾರ್ಯದರ್ಶಿ ಹರಿಚಂದ್ರ ಪೂಜಾರಿ ಮುಚ್ಚಿಲ, ಸಿದ್ಧಿವಿನಾಯಕ ಭಜನಾ ಮಂದಿರದ ಗೌರವಾಧ್ಯಕ್ಷ ಭಾಸ್ಕರ ಎಸ್.ಗೌಡ ಒಡ್ಯತ್ತಡ್ಡ, ಅಧ್ಯಕ್ಷ ಅಕ್ಷಯ್ ನೇರ್ಲ, ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ನಿಡ್ಯಡ್ಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here