ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ-ಕೌಕ್ರಾಡಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೆಲ್ಯಾಡಿ-ಕೌಕ್ರಾಡಿ ಇವುಗಳ ಸಹಕಾರದಲ್ಲಿ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.7ರಂದು ನೆಲ್ಯಾಡಿ-ಕೌಕ್ರಾಡಿ ಶ್ರೀ ಶಬರೀಶ ಕಲಾ ಮಂದಿರದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 6ಕ್ಕೆ ನೆಲ್ಯಾಡಿ-ಹಾರ್ಪಳ ಶ್ರೀ ಶಾಸ್ತಾರೇಶ್ವರ ದೇವಸ್ತಾನದ ಪ್ರಧಾನ ಅರ್ಚಕರಾದ ಶ್ರೀಧರ ನೂಜಿನ್ನಾಯ ಪೌರೋಹಿತ್ಯದಲ್ಲಿ ಶ್ರೀ ಗಣಪತಿ ದೇವರ ಪ್ರತಿಷ್ಠೆ ನಡೆಯಲಿದೆ. ಬಳಿಕ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ, ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ಮಹಿಳಾ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ ಗಂಟೆ 8.15ಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ದೇವರಿಗೆ ಸೀಯಾಳಾಭಿಷೇಕ, 8.30ಕ್ಕೆ ಗಣಹೋಮ ನಡೆಯಲಿದೆ. ಬೆಳಿಗ್ಗೆ 8.3೦ರಿಂದ 10.15ರ ತನಕ ಛದ್ಮವೇಷ ಸ್ಪರ್ಧೆ ನಡೆಯಲಿದೆ.
ಧರ್ಮಜಾಗೃತಿ ಸಭೆ:
10.45ಕ್ಕೆ ಗಣೇಶೋತ್ಸವ ಸಮಿತಿ ಅಧ್ಯಕ್ಷ ರವಿಚಂದ್ರ ಗೌಡ ಅತ್ರಿಜಾಲು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ ಕೆದ್ದೊಟೆ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಗೋಳಿತ್ತೊಟ್ಟು ದುರ್ಗಾಬೀಡಿ ಮಾಲಕರಾದ ಕೇಶವ ಪೂಜಾರಿ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಇಂಡಿಯನ್ ಸಮೂಹ ಸಂಸ್ಥೆಗಳ ನಿರ್ದೇಶಕರೂ, ಮಂಗಳೂರು ನಾಯರ್ ಸರ್ವಿಸ್ ಸೊಸೈಟಿ ಅಧ್ಯಕ್ಷ ಮುರಳಿ ನಾಯರ್ ಹೊಸಮಜಲು, ಶ್ರೀ ಕ್ಷೇ.ಧ.ಗ್ರಾ.ಯೋಜನೆ ನೆಲ್ಯಾಡಿ ವಲಯ ಮೇಲ್ವಿಚಾರಕ ವಿಜೇಶ್ ಜೈನ್ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1ಕ್ಕೆ ಶ್ರೀ ಗಣಪತಿ ದೇವರಿಗೆ ಮಹಾರಂಗಪೂಜೆ, ಮಹಾಪೂಜೆ, ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 1.15ಕ್ಕೆ ಸುರೇಖಾ ಮತ್ತು ಶಿಷ್ಯ ವೃಂದದವರಿಂದ ಭರತನಾಟ್ಯ ಕಾರ್ಯಕ್ರಮ, ಅಪರಾಹ್ನ ೩ರಿಂದ ಶ್ರೀ ಗಣಪತಿ ದೇವರ ಭವ್ಯ ಶೋಭಾಯಾತ್ರೆ ನಡೆಯಲಿದೆ ಎಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ರವಿಚಂದ್ರ ಗೌಡ ಅತ್ರಿಜಾಲು, ಉಪಾಧ್ಯಕ್ಷ ರಮೇಶ್ ಶೆಟ್ಟಿ ಬೀದಿಮನೆ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಎಂ.ಟಿ., ಕೋಶಾಧಿಕಾರಿ ರವಿಚಂದ್ರ ಹೊಸವಕ್ಲು, ಜೊತೆ ಕಾರ್ಯದರ್ಶಿ ರಮೇಶ್ ಬಾಣಜಾಲು ಹಾಗೂ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಡಾ.ಸದಾನಂದ ಕುಂದರ್, ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲು, ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಕೆ.ಎಸ್., ಕೋಶಾಧಿಕಾರಿ ವಿನೋದ್ಕುಮಾರ್ ಬಾಕಿಜಾಲು, ಜೊತೆ ಕಾರ್ಯದರ್ಶಿ ಮೋಹನ್ ಗೌಡ ಕಟ್ಟೆಮಜಲ ತಿಳಿಸಿದ್ದಾರೆ.