ಕಾವು: ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ 2023-2024ನೇ ಸಾಲಿನ ಸರ್ವಸದಸ್ಯರ ಸಾಮಾನ್ಯ ಸಭೆಯು ಸೆ.8 ರಂದು ಬೆಳಿಗ್ಗೆ ಗಂಟೆ 10ಕ್ಕೆ ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷ ಕೆ. ಚಂದ್ರಶೇಖರ ರಾವ್‌ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಆ ಪ್ರಯುಕ್ತ ಸಂಘದ ಸದಸ್ಯರೆಲ್ಲರೂ ಕ್ಲಪ್ತ ಸಮಯದಲ್ಲಿ ಆಗಮಿಸಿ ಸಭೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಹಕರಿಸುವಂತೆ ಸಂಘದ ಪ್ರಭಾರ ಕಾರ್ಯದರ್ಶಿ ಸುಪ್ರೀತ್ ಕುಮಾರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.