ನೆಲ್ಯಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುದ್ಯ ಬಜತ್ತೂರು ಇದರ ವತಿಯಿಂದ 11ನೇ ವರ್ಷದ ಶ್ರೀ ಗಣೇಶೋತ್ಸವ ಮತ್ತು ಧಾರ್ಮಿಕ ಸಮಾರಂಭ ಸೆ.7ರಂದು ಬಜತ್ತೂರು ಮುದ್ಯ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ ೭ಕ್ಕೆ ವಿದ್ಯಾಗಣಪತಿ ಪ್ರತಿಷ್ಠೆ ನಡೆಯಲಿದೆ. 8ಕ್ಕೆ 12 ತೆಂಗಿನಕಾಯಿಯ ಗಣಹವನ ನಡೆಯಲಿದೆ. 8.3೦ಕ್ಕೆ ಶ್ರೀ ಪಂಚಲಿಂಗೇಶ್ವರ ದೇವರಿಗೆ ನಿತ್ಯಪೂಜೆ, ಕುಂತೂರು-ಗಡಿಯಾರ್ನಡ್ಕ ಶ್ರೀ ಮಹಾಮ್ಮಾಯಿ ಭಜನಾ ತಂಡದವರಿಂದ ಭಜನೆ ನಡೆಯಲಿದೆ. ೯.೩೦ರಿಂದ ಗೌರವಾರ್ಪಣೆ ಹಾಗೂ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. 11ರಿಂದ ಮಹಾಪೂಜೆ ನಡೆಯಲಿದೆ.
ಧಾರ್ಮಿಕ ಸಭೆ:
11.30ರಿಂದ ಧಾರ್ಮಿಕ ಸಭೆ ನಡೆಯಲಿದ್ದು ನಿವೃತ್ತ ಪ್ರಾಧ್ಯಾಪಕ ನೇಮಿಚಂದ್ರ ಗೌಡ ಮುದ್ಯ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಸ್ವರ್ಣಲತಾ ಪಡಿವಾಳ್ ಬಾರಿಕೆ, ಉಪ್ಪಿನಂಗಡಿ ಗಿರಿಜಾ ಕ್ಲಿನಿಕ್ನ ದಂತ ವೈದ್ಯ ಡಾ.ರಾಜಾರಾಮ್ ಕೆ.ಬಿ., ಪುತ್ತೂರು ಆದರ್ಶ ವಿವಿದೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಅಶ್ವಿನ್ ಎಲ್.ಶೆಟ್ಟಿ, ಬಜತ್ತೂರು ಗ್ರಾ.ಪಂ.ಉಪಾಧ್ಯಕ್ಷೆ ವಿಮಲಭರತ್, ಕಡಬ ರತ್ನಶ್ರೀ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಾಧಾಕೃಷ್ಣ ಕುವೆಚ್ಚಾರು, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ.ವಿ.ಪ್ರಸಾದ್, ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಜಿತ್ ಪಾಲೇರಿ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಕೆ., ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಅನ್ನಸಂತರ್ಪಣೆ, ಭಾಸ್ಕರ ಮತ್ತು ಉಮೇಶ ಬಿ.ಸಿ.ರೋಡ್ ಬಳಗದವರಿಂದ ಭಕ್ತಿ ಗಾನ ಸುಧೆ ನಡೆಯಲಿದೆ. ಸಂಜೆ ವಿವಿಧ ಭಜನಾ ತಂಡಗಳಿಂದ ಕುಣಿತ ಭಜನೆಯೊಂದಿಗೆ ಶೋಭಾಯಾತ್ರೆ ನಡೆದು ಮುಗೇರಡ್ಕ ಕ್ರಾಸ್ ಬೆದ್ರೋಡಿ ನರ್ಸರಿ ಬಳಿ ನೇತ್ರಾವತಿ ನದಿಯಲ್ಲಿ ದೇವರ ಮೂರ್ತಿ ವಿಸರ್ಜನೆ ನಡೆಯಲಿದೆ ಎಂದು ಪ್ರಧಾನ ಅರ್ಚಕರಾದ ಕೃಷ್ಣಪ್ರಸಾದ್ ಉಡುಪ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಗೋಪಾಲ ವಳಾಲುದಡ್ಡು, ಆಚರಣಾ ಸಮಿತಿ ಅಧ್ಯಕ್ಷ ಶೇಖರ ಪೂಜಾರಿ ಶಿಬಾರ್ಲಗುತ್ತು ಹಾಗೂ ಪದಾಧಿಕಾರಿಗಳು, ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.