ಉಪ್ಪಿನಂಗಡಿ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.
ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಅಝೀಝ್ ಬಸ್ತಿಕ್ಕಾರ್ ಮಾತನಾಡಿ, ಕೆಲವು ಮಕ್ಕಳು ಬಡತನದಲ್ಲಿ ಇದ್ದರೂ ಸಹ ಕಲಿಯುವ ಆಸಕ್ತಿ ಅವರಲ್ಲಿ ಹೆಚ್ಚಾಗಿರುತ್ತದೆ. ಅಂತಹ ಆಸಕ್ತಿಯುತ ವಿದ್ಯಾರ್ಥಿಗಳಿಗೆ ಕಲಿಯುವ ಅವಕಾಶವನ್ನು ನಾವು ಮಾಡಿಕೊಡಬೇಕಿದೆ ಎಂಬುದುನ್ನು ನೈಜ ಘಟನೆಯೊಂದನ್ನು ಹೇಳುವ ಮೂಲಕ ವಿವರಿಸಿದರಲ್ಲದೆ, ವಿದ್ಯಾರ್ಥಿಗಳು ಕಲಿತ ಶಿಕ್ಷಣ ಸಂಸ್ಥೆಯನ್ನು ಮರೆಯಬಾರದು. ಮುಂದೆ ನೀವು ಕೂಡ ಈ ರೀತಿಯ ಉತ್ತಮ ಕಾರ್ಯಗಳನ್ನು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಮುಖ್ಯ ಅತಿಥಿಯಾಗಿದ್ದ ಅಶ್ರಫ್ ಬಸ್ತಿಕಾರ್, ಇದೊಂದು ಪುಣ್ಯ ಕಾರ್ಯ. ಬಲಗೈಯಿಂದ ಕೊಟ್ಟ ದಾನ ಎಡಗೈಗೂ ತಿಳಿಯಬಾರದು. ಮುಂದೆ ನೀವು ಕೂಡ ಇಂತಹ ಪುಣ್ಯದ ಕೆಲಸಗಳನ್ನು ಮಾಡಬೇಕಿದೆ. ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ತಿಳಿಸಿದರು.
ಪುತ್ತೂರು ತಾ.ಪಂ.ನ ಸಹಾಯಕ ನಿರ್ದೇಶಕಿ ಶ್ರೀಮತಿ ಶೈಲಜಾ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಇಬ್ರಾಹೀಂ ಎಂ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷ ಇಸ್ಮಾಯೀಲ್ ಇಕ್ಬಾಲ್, ದಾನಿ ಪ್ರಕಾಶ್ ಮಸ್ಕರೇನಸ್‌ರ ಸಹೋದರಿ ಸವಿತಾ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯೆ ಅನಿ ಮಿನೇಜಸ್ ಉಪಸ್ಥಿತರಿದ್ದರು.
ಉಪನ್ಯಾಸಕರಾದ ಡಾ.ಮಂಜುಳಾ ಬನಾಕರ್ ಪ್ರತಿಭಾನ್ವಿತ ವಿದ್ಯಾರ್ಥಿಗಳ ಹೆಸರಿನ ಪಟ್ಟಿಯನ್ನು ವಾಚಿಸಿದರು. ಶ್ರೀಮತಿ ಆಶಾ ಸ್ವಾಗತಿಸಿದರು. ಪ್ರಜ್ಞಾ ಶೆಟ್ಟಿ ವಂದಿಸಿದರು. ವಿದ್ಯಾರ್ಥಿನಿಯರಾದ ರಶ್ಮಿ ಹಾಗೂ ಸೃಜನ್ಯ ಪ್ರಾರ್ಥಿಸಿದರು. ನೌಶಿರಾ ಕಾರ್ಯಕ್ರಮ ನಿರೂಪಿಸಿದರು.