ಪುತ್ತೂರು: ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಶ್ರೀ ವಾಸುದೇವ ತಂತ್ರಿಗಳು ಕುಂಟಾರುರವರ ಮಾರ್ಗದರ್ಶನದಲ್ಲಿ ಸಾರ್ವಜನಿಕ ಗಣೇಶೋತ್ಸವ ಸೆ.7ರಂದು ನಡೆಯಲಿದೆ.
ಬೆಳಿಗ್ಗೆ ಗಣಪತಿ ಹೋಮ, ವಿಗ್ರಹ ಪ್ರತಿಷ್ಠೆ, ಭಜನಾ ಕಾರ್ಯಕ್ರಮ, ಸಾರ್ವಜನಿಕರಿಗೆ ಮನೋರಂಜನಾ ಕ್ರೀಡೆಗಳು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಮಧ್ಯಾಹ್ನ ಭಕ್ತಿಗೀತೆ ಸ್ಪರ್ಧೆ, ಸ್ಥಳೀಯ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ ಬಹುಮಾನ ವಿತರಣೆ, ಬಳಿಕ ಶ್ರೀ ಗಣೇಶನ ವೈಭವದ ಶೋಭಾಯಾತ್ರೆ ನಡೆಯಲಿದೆ. ಶ್ರೀ ಗಣಪತಿ ವಿಗ್ರಹದ ಶೋಭಾಯಾತ್ರೆಯು ಕುಣಿತ ಭಜನೆ ಮತ್ತು ಭಜನಾ ತಂಡದೊಂದಿಗೆ ದೇವಸ್ಥಾನದ ವಠಾರದಿಂದ ಹೊರಟು ಈಶ್ವರಮಂಗಲ ಮುಖ್ಯ ಪೇಟೆಯಲ್ಲಿ ಸಾಗಿ ಪಟ್ಲಡ್ಕ ಹೊಳೆಯಲ್ಲಿ ವಿಸರ್ಜನೆ ನಡೆಯಲಿದೆ.