Bantwal: ನವದಂಪತಿ ಸಂಚರಿಸುತ್ತಿದ್ದ ಕಾರು ಅಪಘಾತ: ನವವಿವಾಹಿತೆ ಮೃತ್ಯು – ಪತಿ‌ ಗಂಭೀರ

0

ಪೆರ್ನೆ ನಿವಾಸಿ ನವದಂಪತಿ ದೇಂತಡ್ಕಕ್ಕೆ ಬಂದು ಹಿಂದಿರುಗುತ್ತಿದ್ದಾಗ ನಡೆದ ದುರ್ಘಟನೆ

ವಿಟ್ಲ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರೊಂದು ಭೀಕರ ಅಪಘಾತಕ್ಕೀಡಾಗಿ ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ (Bantwala) ತಲಪಾಡಿ ಎಂಬಲ್ಲಿ ನಡೆದಿದೆ.

ಪೆರ್ನೆ (Perne) ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣರವರ ಪತ್ನಿ ಮಾನಸ ಮೃತದುರ್ದೈವಿ ನವವಿವಾಹಿತೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣರವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.


ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ದವದಂಪತಿಗಳ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲೇರಿ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ.


ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸು ಮಾವನ ಮನೆಗೆ ಹೋಗುವ ವೇಳೆ ಈ‌ಘಟನೆ ನಡೆದಿದೆ ಎನ್ನಲಾಗಿದೆ.


ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here