ರಾಮಕುಂಜ: ’ಸಂಸ್ಕಾರ ಕುಂಜ ’ಮಾಲಿಕೆ -3 ವಿಶೇಷ ಉಪನ್ಯಾಸ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಸತಿ ನಿಲಯದಲ್ಲಿ ’ಸಂಸ್ಕಾರ ಕುಂಜ ’ಮಾಲಿಕೆ -3 ವಿಶೇಷ ಉಪನ್ಯಾಸ ಕಾರ್ಯಕ್ರಮ ಸೆ.8ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ನಂದೀಶ್ ವೈ ಡಿ ಅವರು ’ಮಕ್ಕಳ ಮಾನಸಿಕ ಸಿದ್ಧತೆ ಮತ್ತು ಉಜ್ವಲ ಭವಿಷ್ಯ ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿ, ವಿದ್ಯಾರ್ಥಿಗಳೆಲ್ಲರೂ ಉಜ್ವಲ ಭವಿಷ್ಯ ರೂಪಿಸಲು ಉತ್ತಮ ಹವ್ಯಾಸದೊಂದಿಗೆ, ಒಳ್ಳೆಯ ಗುಣಗಳನ್ನು ಬೆಳೆಸಿಕೊಳ್ಳಬೇಕು. ಬಾಹ್ಯ ಆಕರ್ಷಣೆಗೆ ಒಳಗಾಗದೆ, ಕ್ಷಣಿಕ ಸುಖಗಳನ್ನು ತ್ಯಜಿಸಿ, ನಮ್ಮಲ್ಲಿರುವ ಶಕ್ತಿಯನ್ನು ಸದ್ಬಳಕೆ ಮಾಡಿಕೊಂಡು, ಆತ್ಮವಿಮರ್ಶೆಯೊಂದಿಗೆ ಬದುಕಬೇಕು ಎಂದು ಹೇಳಿದರು.


ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಮಾತನಾಡಿ, ವಿದ್ಯಾರ್ಥಿಗಳೆಲ್ಲರೂ ನಿರ್ದಿಷ್ಟ ಧ್ಯೇಯವನ್ನಿಟ್ಟುಕೊಂಡು ಒಳ್ಳೆಯ ಮೌಲ್ಯಗಳನ್ನು ಬೆಳೆಸಿಕೊಂಡಾಗ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದರು. ಸಂಸ್ಥೆಯ ವ್ಯವಸ್ಥಾಪಕ ರಮೇಶ್ ರೈ, ಸಿಬಿಎಸ್‌ಸಿ ಪ್ರಾಂಶುಪಾಲ ಪ್ರವೀದ್, ನಿಲಯ ಪಾಲಕರು, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು. ಶಿಕ್ಷಕ ಕಿಶೋರ್ ಕುಮಾರ್ ಬಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here