ಕಡಬ ವಲಯ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ-ರಾಮಕುಂಜ ಕ.ಮಾ.ಪ್ರೌಢ ಶಾಲೆಯ ಬಾಲಕ,ಬಾಲಕಿಯರ ತಂಡ ಪ್ರಥಮ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇವರ ಸಹಭಾಗಿತ್ವದಲ್ಲಿ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ನಡೆದ ಕಡಬ ವಲಯ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.


ಬಾಲಕರ ವಿಭಾಗದಲ್ಲಿ ಶಾಲಾ ವಿದ್ಯಾರ್ಥಿ ಅಜಯ್ ಬೆಸ್ಟ್ ಡಿಫೆಂಡರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಬಾಲಕಿಯರ ವಿಭಾಗದಲ್ಲಿ ರಮ್ಯ ಬೆಸ್ಟ್ ರೈಡರ್ ಪ್ರಶಸ್ತಿಯನ್ನು ಹಾಗೂ ಧನ್ವಿ ಬೆಸ್ಟ್ ಡಿಫೆಂಡರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಮಾಧವ ಬಿ.ಕೆ., ಜಶ್ವಂತ್ ಹಾಗೂ ಮಂಜುನಾಥ್ ಅವರು ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಅವರು ಮಾರ್ಗದರ್ಶನ ನೀಡಿದ್ದರು. ಶಾಲಾ ಮುಖ್ಯಗುರು ಸತೀಶ್ ಭಟ್ ಹಾಗೂ ಶಿಕ್ಷಕ ವೃಂದದವರು ಸಹಕರಿಸಿದ್ದರು.

LEAVE A REPLY

Please enter your comment!
Please enter your name here