ನೆಲ್ಯಾಡಿ: ಇಲ್ಲಿನ ಸೂರ್ಯನಗರ ಶ್ರೀರಾಮ ವಿದ್ಯಾಲಯದಲ್ಲಿ ಸೆ.5ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಅತಿಥಿ ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕ ವೆಂಕಟರಮಣ ಅವರು ಸರ್ವಪಳ್ಳಿ ರಾಧಾಕೃಷ್ಣನ್‌ರವರ ಜೀವನ ಹಾಗೂ ವೃತ್ತಿಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ, ಶಿಕ್ಷಕರಿಗೆ ಶುಭಾಶಯ ಹೇಳಿದರು.
ಶಾಲಾ ಮುಖ್ಯಶಿಕ್ಷಕ ಗಣೇಶ್ ವಾಗ್ಲೆ ಹಾಗೂ ಶಾಲಾ ಶಿಕ್ಷಕ- ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹತ್ತನೇ ಹಾಗೂ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳು ಆಯೋಜಿಸಿದ್ದು ವಿದ್ಯಾರ್ಥಿಗಳು ಶಿಕ್ಷಕರ ಪಾದ ಪೂಜೆಯನ್ನು ನಡೆಸಿ, ಶಿಕ್ಷಕರಿಗೆ ಹಲವಾರು ಒಳಾಂಗಣ ಆಟಗಳನ್ನು ಏರ್ಪಡಿಸಿದ್ದರು. ಶಿಕ್ಷಕರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿ ಗಾನವಿ ನಿತ್ಯ ಪಂಚಾಂಗ ವಾಚಿಸಿದರು. ಆಶಿಕ ಅಮೃತವಚನ ವಾಚಿಸಿದರು. ಮದ್ವಿತ್ ವಂದಿಸಿದರು. ಪ್ರತೀಕ್ಷ ಕಾರ್ಯಕ್ರಮ ನಿರೂಪಿಸಿದರು.