ನೆಲ್ಯಾಡಿ: ಮಲಯಾಳಿ ವಿಶ್ವಕರ್ಮ ಸೇವಾ ಟ್ರಸ್ಟ್ ನೆಲ್ಯಾಡಿ ಇದರ ವತಿಯಿಂದ ಓಣಂ ಹಬ್ಬದ ಪ್ರಯುಕ್ತ ಸಮಾಜ ಬಾಂಧವರಿಗೆ ವಿವಿಧ ಕ್ರೀಡಾಕೂಟ ಸೆ.8ರಂದು ನೆಲ್ಯಾಡಿ ಗಾಂಧಿ ಮೈದಾನದಲ್ಲಿ ನಡೆಯಿತು.
ವೇಲು ಆಚಾರಿ ನೆರಿಯ ಕ್ರೀಡಾಕೂಟ ಉದ್ಘಾಟಿಸಿದರು. ಅತಿಥಿಯಾಗಿದ್ದ ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್ ಅವರು ಮಲಯಾಳಿ ವಿಶ್ವಕರ್ಮ ಸೇವಾ ಟ್ರಸ್ಟ್‌ನ ಲಕ್ಕಿಡಿಪ್ ಉದ್ಘಾಟಿಸಿದರು. ಟ್ರಸ್ಟ್‌ನ ಅಧ್ಯಕ್ಷ ಸಜಿ ನೆಲ್ಯಾಡಿ, ಶ್ರೀ ಕಾಳಿಕಾಂಬಾ ದೇವಸ್ಥಾನದ ಅಧ್ಯಕ್ಷರಾದ ಮಧುಸೂದನ್ ನೆರಿಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೆಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿ ಆಯ್ಕೆಯಾದ ಶಾಂತಿಕೃಷ್ಣ ಕುಟ್ಟಿಯವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ವಿಶ್ವಕರ್ಮ ಸೇವಾ ಟ್ರಸ್ಟ್‌ನ ನಿರ್ದೇಶಕರು ಉಪಸ್ಥಿತರಿದ್ದರು.
ಟ್ರಸ್ಟ್‌ನ ಕಾರ್ಯದರ್ಶಿ, ನೆಲ್ಯಾಡಿ ಗ್ರಾ.ಪಂ.ಉಪಾಧ್ಯಕ್ಷೆ ರೇಷ್ಮಾಶಶಿ ಕಾರ್ಯಕ್ರಮ ನಿರೂಪಿಸಿದರು. ಜೊತೆ ಕಾರ್ಯದರ್ಶಿ ವಿನೋದ್ ಮರ್ದಾಳ ವಂದಿಸಿದರು. ರಾಜನ್ ಪಡ್ಡಡ್ಕ ಪ್ರಾರ್ಥಿಸಿದರು. ವಿನೋದ್ ಕಕ್ಕಿಂಜೆ ಕ್ರೀಡಾಕೂಟ ನಿರ್ವಹಿಸಿದರು. ವಿಶ್ವಕರ್ಮ ಸಮಾಜದ ಸದಸ್ಯರು ಪಾಲ್ಗೊಂಡಿದ್ದರು.