ಫುಟ್ಬಾಲ್ ಪಂದ್ಯಾಟ:ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0


ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ ಹಾಗೂ ವಿವೇಕಾನಂದ ಪ.ಪೂ ಕಾಲೇಜು  ಇವರ ಜಂಟಿ  ಆಶ್ರಯದಲ್ಲಿ ಸೆ.3 ರಂದು ವಿವೇಕಾನಂದ ಪ ಪೂ ಕಾಲೇಜಿನಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ  ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಬಾಲಕರ ವಿಭಾಗವು ಪ್ರಥಮ ಸ್ಥಾನ ಪಡೆದು ಮೂಡಬಿದ್ರೆ ಆಲ್ – ಫರ್ಕ್ಯಾನ್ ಇಸ್ಲಾಮಿಕ್ ಪ.ಪೂ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.


   ಕಾಲೇಜಿನ ಪ್ರಾಂಶುಪಾಲ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here