ಶಾಂತಿನಗರ : ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಥ್ರೋಬಾಲ್ ಪಂದ್ಯಾಟ

0

ಉಪ್ಪಿನಂಗಡಿ: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಥ್ರೋ ಬಾಲ್ ಪಂದ್ಯಾಟವು ಗೋಳಿತ್ತಟ್ಟು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಂತಿನಗರ ಗೋಳಿತ್ತಟ್ಟು ಇಲ್ಲಿ ಸೆ.4ರಂದು ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗೋಳಿತ್ತೊಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಬು ಪೂಜಾರಿ ಕಿನ್ಯಡ್ಕ , ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅತ್ಯವಶ್ಯವಾಗಿದ್ದು ಗ್ರಾಮೀಣ ಪ್ರದೇಶದ ಈ ಸರ್ಕಾರಿ ಶಾಲೆಯಲ್ಲಿ ಈ ಊರಿನ ಕ್ರೀಡಾಭಿಮಾನಿಗಳು, ಪೋಷಕರು ಹಾಗೂ ಶಿಕ್ಷಕರು ಈ ಕ್ರೀಡೆಯ ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದರು.

ಮುಖ್ಯ ಅತಿಥಿಗಳಾಗಿ, ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಅಲೆಕ್ಕಿ, ಹೇಮಲತಾ ಮುರಿಯೇಲು, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಂಜುನಾಥ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕುಶಾಲಪ್ಪ ನಾಯ್ಕ್, ಆದರ್ಶ ಯುವಕ ಮಂಡಲದ ಅಧ್ಯಕ್ಷ ತೇಜಸ್ ಶಾಂತಿನಗರ, ವಲಯದ ಕ್ರೀಡಾ ನೋಡೆಲ್ ಅಧಿಕಾರಿಗಳಾದ ಕುಶಾಲಪ್ಪ ಪಡುಬೆಟ್ಟು ಹಾಗೂ ಗಂಗಾಧರ ಉಪ್ಪಿನಂಗಡಿ ಉಪಸ್ಥಿತರಿದ್ದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಪುರುಷೋತ್ತಮ ಗುರುಂಪು ವಹಿಸಿದ್ದರು. ಶಾಲಾ ಮುಖ್ಯಗುರು ಪ್ರದೀಪ್ ಬಾಕಿಲ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕುಶಾಲಪ್ಪ ನಾಯ್ಕ್ ವಂದಿಸಿದರು. ಶಿಕ್ಷಕ ಮಂಜುನಾಥ ಮಣಕವಾಡ ಕಾರ್ಯಕ್ರಮ ನಿರೂಪಿಸಿದರು.

ಸಮಾರೋಪ ಸಮಾರಂಭ:
ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ 11 ತಂಡಗಳು ಮತ್ತು ಬಾಲಕಿಯರ ವಿಭಾಗದಲ್ಲಿ 9 ತಂಡಗಳು ಭಾಗವಹಿಸಿದ್ದ ಈ ಪಂದ್ಯಾಟದಲ್ಲಿ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಬಾಲಕ ಮತ್ತು ಬಾಲಕಿಯರ ತಂಡ ಎರಡೂ ವಿಭಾಗದಲ್ಲಿ ಚಾಂಪಿಯನ್ ಆಗಿ ಮೂಡಿ ಬಂತು.


ದ್ವಿತೀಯ ಸ್ಥಾನವನ್ನು ಬಾಲಕರ ವಿಭಾಗದಲ್ಲಿ ಸೈಂಟ್ ಮೇರಿಸ್ ವಿದ್ಯಾ ಸಂಸ್ಥೆ ಉಪ್ಪಿನಂಗಡಿ ಮತ್ತು ಬಾಲಕಿಯರ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಬಂಡಾಡಿ ಪಡೆದುಕೊಂಡಿತು.


ಬಹುಮಾನ ವಿತರಣಾ ಸಂದರ್ಭದಲ್ಲಿ ತಾಲ್ಲೂಕ್ ದೈಹಿಕ ಪರಿವೀಕ್ಷಣಾಧಿಕಾರಿ ಚಕ್ರಪಾಣಿ, ಶಾಲಾ ಹಿತೈಷಕರುಗಳಾದ ನಾರಾಯಣ ಪೂಜಾರಿ ಡೆಂಬಲೆ, ಮೋನಪ್ಪ ಪೂಜಾರಿ ಡೆಂಬಳೆ, ರಮೇಶ್ ಪೆರ್ಲ, ಅಣ್ಣು ಗೌಡ ಕುವೆತ್ತಿಮಾರು, ರಾಘವೇಂದ್ರ ಮುರಿಯೇಲು, ಹರೀಶ್ ಡೆಂಬಳೆ, ಅಬೂಬಕ್ಕರ್ ನೂಜೋಳು, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here