ಸಮಾಜಕ್ಕೆ, ದೇಶಕ್ಕೆ ಉತ್ತಮ ಸಂದೇಶ ಕೊಡುವ ಕಾರ್ಯಕ್ರಮವಾಗಬೇಕು – ಅಶೋಕ್ ಕುಮಾರ್ ರೈ
ಪುತ್ತೂರು: ಪ್ರಜಾಪ್ರಭುತ್ವಕ್ಕಾಗಿ ಕರ್ನಾಟಕದಲ್ಲಿ ಮಾನವ ಸರಪಳಿ (ಸಮಾನತೆ, ಭ್ರಾತೃತ್ವ ಮತ್ತು ಸ್ವಾತಂತ್ರ್ಯ) ಎಂಬ ಧೈಯವಾಕ್ಯದೊಂದಿಗೆ ಸೆ.15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದ್ದು ಈ ಸಂಬಂಧ ಜಿಲ್ಲೆಯಲ್ಲಿ 60 ಕಿ.ಮೀ. ಮಾನವ ಸರಪಳಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ.
ಇದಕ್ಕೆ ಪೂರಕವಾಗಿ ಪುತ್ತೂರು ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಅಂದು ಬೆಳಿಗ್ಗೆ ಗಂ.9.30 ರಿಂದ 10.30 ರವರೆಗೆ ಕಬಕದಿಂದ ಕನಕಮಜಲು ತನಕ 30 ಕಿ.ಮೀ ಮಾನವ ಸರಪಳಿ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು.
ಸೆ.10 ರಂದು ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು.
ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಉಪಾಧ್ಯಕ್ಷ ಬಾಲಚಂದ್ರ, ಸಹಾಯ ಕಮೀಷನರ್ ಜುಬಿನ್ ಮೊಹಪಾತ್ರ, ಜಿಲ್ಲಾ ಆರೋಗ್ಯಾಧಿಕಾರಿ ತಿಪ್ಪೆಸ್ವಾಮಿ, ತಹಸೀಲ್ದಾರ್ ಪುರಂದರ ಹೆಗ್ಡೆ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್, ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಕೃಷ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.